ಮಂಗಳೂರು: ಕರ್ನಾಟಕ ಸರ್ಕಾರದ ಸಚಿವ ಸಂಪುಟ (ಕ್ಯಾಬಿನೆಟ್) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆಯುತ್ತಿರುವುದು ಅತ್ಯಂತ ಸ್ವಾಗತಾರ್ಹವಾಗಿದೆ. ಈ ಸಭೆಯ ಮೂಲಕ ಕರಾವಳಿ ಭಾಗದ ದಶಕಗಳ ಬೇಡಿಕೆಗಳು ಮತ್ತು ಜಿಲ್ಲೆಯ ಹಿತದೃಷ್ಟಿಯಿಂದ ಹಲವು ಪ್ರಮುಖ ಅಭಿವೃದ್ಧಿ ಕಾರ್ಯಗಳು ಕಾರ್ಯಗತವಾಗಲಿವೆ ಎಂಬ ದೊಡ್ಡ ನಿರೀಕ್ಷೆ ಜನರಲ್ಲಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ (BJP) ದಕ್ಷಿಣ ಕನ್ನಡ ಜಿಲ್ಲಾ ಘಟಕವು, ಜಿಲ್ಲೆಯ ಸಮಗ್ರ ಪ್ರಗತಿ ಮತ್ತು ಸಾಂಸ್ಕೃತಿಕ ಅಸ್ಮಿತೆಯನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳ ಮುಂದೆ 44 ಪ್ರಮುಖ ಪೂರಕ ಬೇಡಿಕೆಗಳನ್ನು ಮಂಡಿಸಿದ್ದು, ಇವುಗಳನ್ನು ಈ ತಕ್ಷಣವೇ ಈಡೇರಿಸಬೇಕೆಂದು ಆಗ್ರಹಿಸಿದೆ.

ಕರಾವಳಿಯ ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಬೆಳವಣಿಗೆಗೆ ಪೂರಕವಾಗಿರುವ ಈ ಎಲ್ಲ ನ್ಯಾಯಯುತ ಬೇಡಿಕೆಗಳನ್ನು ಮಂಗಳೂರಿನಲ್ಲಿ ನಡೆಯುವ ಕ್ಯಾಬಿನೆಟ್ ಸಭೆಯಲ್ಲೇ ಚರ್ಚಿಸಿ, ಅನುಮೋದನೆ ನೀಡಬೇಕಾಗಿ ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಘಟಕವು ಮಾನ್ಯ ಮುಖ್ಯಮಂತ್ರಿಗಳಲ್ಲಿ ಮತ್ತು ರಾಜ್ಯ ಸರ್ಕಾರದಲ್ಲಿ ಅತ್ಯಂತ ಕಳಕಳಿಯಿಂದ ವಿನಂತಿಸಿದೆ.






ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ಉಮಾನಾಥ ಕೋಟ್ಯಾನ್, ರಾಜೇಶ್ ನಾಯ್ಕ್, ಡಾ. ಭರತ್ ಶೆಟ್ಟಿ, ಹರೀಶ್ ಪೂಂಜ, ವೇದವ್ಯಾಸ್ ಕಾಮತ್, ಕಿಶೋರ್ ಕುಮಾರ್ ಪುತ್ತೂರು, ಭಾಗೀರಥಿ ಮುರುಳ್ಯ, ಹಾಗೂ ಇದೇ ಸಂದರ್ಭದಲ್ಲಿ ಜಿಲ್ಲೆಯ ಶಾಸಕರಾದ ಅಶೋಕ್ ರೈ, ಐವನ್ ಡಿಸೋಜ, ಮಂಜುನಾಥ್ ಭಂಡಾರಿ ಉಪಸ್ಥಿತಿತರಿದ್ದರು

