ಮಂಗಳೂರು: ಆಡಂಕುದ್ರುನಲ್ಲಿ ಕಳ್ಳಭಟ್ಟಿ ಸಾರಾಯಿ ತಯಾರಿಸಿ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಉರ್ಬನ್ ಡಿಸೋಜಾ ಎಂಬಾತನನ್ನು ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ.
ಕಾರ್ಯಾಚರಣೆ ವೇಳೆ 5 ಲೀಟರ್ ಕಳ್ಳಭಟ್ಟಿ ಸಾರಾಯಿ, ಕಳ್ಳಭಟ್ಟಿ ತಯಾರಿಸಲು ಉಪಯೋಗಿಸುತ್ತಿದ್ದ ಸಲಕರಣೆಗಳು, 40 ಲೀ.ನಷ್ಟು ಬೆಲ್ಲದ ಕೊಳೆ ಪತ್ತೆಯಾಗಿದೆ.
ಮಂಗಳೂರು ದಕ್ಷಿಣ ವಲಯದ ಅಬಕಾರಿ ಕಮಲ ಎಚ್. ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಬಕಾರಿ ಉಪನಿರೀಕ್ಷಕ ಹರೀಶ್ ಪಿ. ಕಾನ್ಸ್ಟೇಬಲ್‌ಗಳಾದ ಬಸವಾರಜ ತೊರೆ, ಆನಂದ್, ವಾಹನಚಾಲಕ ರಘುರಾಮ ಕಾರ್ಯಚರಣೆಯಲ್ಲಿ ಸಹಕರಿಸಿದ್ದರು.