ಮಂಗಳೂರು: ನಗರದ ಪ್ರಸಿದ್ಧ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಅಕ್ಟೋಬರ್ 11 ರಿಂದ ಅಕ್ಟೋಬರ್ 21 ರವರೆಗೆ ಅತ್ಯಂತ ವೈಭವದಿಂದ ಜರುಗಲಿರುವ ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವಕ್ಕೆ ಪೂರ್ವಸಿದ್ಧತೆಗಳು ಆರಂಭ ಗೊಂಡಿವೆ. ಮಹೋತ್ಸವದ ಪ್ರಮುಖ ಆಕರ್ಷಣೆ ಯಾದ ಶ್ರೀ ಶಾರದಾ ಮಾತೆ ಮತ್ತು ನವದುರ್ಗೆಯರ ಮೂರ್ತಿಗಳು ಪ್ರತಿಷ್ಠಾಪನೆಗೊಳ್ಳಲಿರುವ ಭವ್ಯ ದರ್ಬಾರ್ ಮಂಟಪದ ರಚನೆಗೆ ಧಾರ್ಮಿಕ ಮತ್ತು ವೈದಿಕ ವಿಧಿವಿಧಾನಗಳೊಂದಿಗೆ ಭಕ್ತಿಭಾವದಿಂದ ಮುಹೂರ್ತ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಕ್ಷೇತ್ರದ ಪದಾಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು. ಕುದ್ರೋಳಿ ಕ್ಷೇತ್ರದ ಅಧ್ಯಕ್ಷರಾದ ಜೈರಾಜ್ ಎಚ್. ಸೋಮಸುಂದರಂ, ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಟ್ರಸ್ಟಿ ಕಿಶೋರ್ ದಂಡೆಕೇರಿ, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಡಾ. ಬಿ.ಜಿ. ಸುವರ್ಣ ಅವರು ಪಾಲ್ಗೊಂಡಿದ್ದರು.

ಇವರೊಂದಿಗೆ ಸಮಿತಿಯ ಸದಸ್ಯರಾದ ರಾಧಾಕೃಷ್ಣ ಉರ್ವ, ಪಿ.ಕೆ. ಗೌರವಿ ರಾಜಶೇಖರ್, ಲತೀಶ್ ಸುವರ್ಣ, ಪ್ರಮುಖ ಉದ್ಯಮಿ ಪ್ರವೀಣ್ ಕುಮಾರ್, ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಕೋಶಾಧಿಕಾರಿ ಯೋಗೀಶ್ ಕೊಟ್ಯಾನ್ ಹಾಗೂ ಮೂಲ್ಕಿ ಸುವರ್ಣ ಆರ್ಟ್ಸ್‌ನ ಚಂದ್ರಶೇಖರ್ ಸುವರ್ಣ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದು.

ಮುಹೂರ್ತ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಮುಂಬರುವ ಮಂಗಳೂರು ದಸರಾ ಮಹೋತ್ಸವವನ್ನು ಎಂದಿನಂತೆ ಅತ್ಯಂತ ಯಶಸ್ವಿ ಹಾಗೂ ವೈಭವಯುತವಾಗಿ ನಡೆಸಲು ಕ್ಷೇತ್ರದ ಆಡಳಿತ ಮಂಡಳಿ ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
