• Home  
  • ವಿಟ್ಲ: ಪಟಾಕಿ ತಯಾರಿಕಾ ಘಟಕದಲ್ಲಿ ಸುಡುಮದ್ದು ಭಾರೀ ಸ್ಫೋಟ
- DAKSHINA KANNADA - HOME - LATEST NEWS

ವಿಟ್ಲ: ಪಟಾಕಿ ತಯಾರಿಕಾ ಘಟಕದಲ್ಲಿ ಸುಡುಮದ್ದು ಭಾರೀ ಸ್ಫೋಟ

ವಿಟ್ಲ: ವಿಟ್ಲ ಸಮೀಪದ ಕಂಬಳಬೆಟ್ಟು ನೂಜಿ ಎಂಬಲ್ಲಿ ಅಕ್ರಮ ಪಟಾಕಿ ತಯಾರಿಕಾ ಘಟಕದಲ್ಲಿ  ಸುಡುಮದ್ದು ಸಿಡಿದು ಭಾರೀ ಸ್ಫೋಟಗೊಂಡ ಘಟನೆ ನಿನ್ನೆ ಸಂಜೆ ವೇಳೆ ನಡೆದಿದೆ. ಕಳೆದ ವರ್ಷ ವಿಟ್ಲ ಮೂಡ್ನೂರು ಗ್ರಾಮದ ಮಾಡತ್ತಡ್ಕ ಪರಿಸರದ ಕೋರೆಯಲ್ಲಿ ಭಾರಿ ಪ್ರಮಾಣದಲ್ಲಿ ಸ್ಫೋಟ ಗೊಂಡ ಘಟನೆ ನಡೆದಿತ್ತು. ಈ ಘಟನೆಯಿಂದ ಆಸುಪಾಸಿನ ಮನೆಗಳಿಗೆ, ಮರ ಗಿಡಗಳಿಗೆ ಹಾನಿಯಾಗಿತ್ತು. ಅಲ್ಲದೆ ಕಳೆದ ಸುಮಾರು ವರ್ಷಗಳ ಹಿಂದೆ ನೂಜಿ ಎಂಬಲ್ಲಿ ಸಿಡಿಮದ್ದು ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಬೆಚ್ಚಿ ಬೀಳಿಸಿತ್ತು. […]

Share News

ವಿಟ್ಲ: ವಿಟ್ಲ ಸಮೀಪದ ಕಂಬಳಬೆಟ್ಟು ನೂಜಿ ಎಂಬಲ್ಲಿ ಅಕ್ರಮ ಪಟಾಕಿ ತಯಾರಿಕಾ ಘಟಕದಲ್ಲಿ  ಸುಡುಮದ್ದು ಸಿಡಿದು ಭಾರೀ ಸ್ಫೋಟಗೊಂಡ ಘಟನೆ ನಿನ್ನೆ ಸಂಜೆ ವೇಳೆ ನಡೆದಿದೆ.

ಕಳೆದ ವರ್ಷ ವಿಟ್ಲ ಮೂಡ್ನೂರು ಗ್ರಾಮದ ಮಾಡತ್ತಡ್ಕ ಪರಿಸರದ ಕೋರೆಯಲ್ಲಿ ಭಾರಿ ಪ್ರಮಾಣದಲ್ಲಿ ಸ್ಫೋಟ ಗೊಂಡ ಘಟನೆ ನಡೆದಿತ್ತು. ಈ ಘಟನೆಯಿಂದ ಆಸುಪಾಸಿನ ಮನೆಗಳಿಗೆ, ಮರ ಗಿಡಗಳಿಗೆ ಹಾನಿಯಾಗಿತ್ತು. ಅಲ್ಲದೆ ಕಳೆದ ಸುಮಾರು ವರ್ಷಗಳ ಹಿಂದೆ ನೂಜಿ ಎಂಬಲ್ಲಿ ಸಿಡಿಮದ್ದು ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಬೆಚ್ಚಿ ಬೀಳಿಸಿತ್ತು.

ಇದೀಗ ಮತ್ತೆ ಅದೇ ಪರಿಸರದಲ್ಲಿ ಭಾರಿ ಪ್ರಮಾಣದ ಸ್ಫೋಟದ ಶಬ್ದ ಕೇಳಿಸಿಕೊಂಡಿದ್ದು, ಜನರು ಭಯ ಭೀತರಾಗಿದ್ದಾರೆ. ಸ್ಫೋಟಗೊಂಡು ವಾತಾವರಣದ ತುಂಬಾ ಬಾನೆತ್ತರದಲ್ಲಿ ಹೊಗೆ ಆವರಿಸಿದೆ. ಕಂಬಳಬೆಟ್ಟು ನಿವಾಸಿ ಗಫೂರ್ ಎಂಬವರು ದೇವಸ್ಥಾನದ ಜಾತ್ರೋತ್ಸವಕ್ಕೆ ಪಟಾಕಿ ತಯಾರಿಸಿ, ಶೇಖರಣೆ ಮಾಡಿದ್ದರು.

ಮಧ್ಯಾಹ್ನದ ವೇಳೆಗೆ ಬಿಸಿಲಿಗೆ ಇದ್ದಕ್ಕಿಂದಂತೆ ಪಟಾಕಿ ಸ್ಫೋಟಗೊಂಡಿದೆ. ಸ್ಥಳದಲ್ಲಿ ಕಾರ್ಮಿಕರು ಹಾಗೂ ಜನರು ಇಲ್ಲದ ಕಾರಣ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. 2017ರಲ್ಲಿ ಗಫೂರ್ ಎಂಬವರ ಮನೆ ಸಮೀಪ ಪಟಾಕಿ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದರು.

ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಇನ್ನೂ ಪ್ರಕರಣ ಇತ್ಯಾರ್ಥಗೊಂಡಿಲ್ಲ. ಇದೀಗ ಅದರ ಸಮೀಪವೇ ಮತ್ತೊಂದು ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಕಂದಾಯ ನಿರೀಕ್ಷಕ ರವಿ , ವಿಟ್ಲ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಪ್ರಕಾಶ್ ದೇವಾಡಿಗ , ವಿಟ್ಲ ಎಸೈ ರಾಮಕೃಷ್ಣ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಇಲ್ಲಿ ಪಟಾಕಿ ತಯಾರಿಸಲು ಯಾವುದೇ ಅನುಮತಿ ಪಡೆದಿರುವುದಿಲ್ಲ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಸದ್ರಿ ಸ್ಥಳದಲ್ಲಿರುವ ಸರಕಾರಿ ಜಮೀನಿನಲ್ಲಿ, ಸ್ಥಳೀಯ ನಿವಾಸಿಯಾದ ಆರೋಪಿತ ನಿವಾಸಿ ಅಬ್ದುಲ್‌ ಗಫೂರ್ ಎಂಭಾತನು ಅಕ್ರಮವಾಗಿ ಶೆಡ್‌ ನಿರ್ಮಿಸಿ, ಯಾವುದೇ ಪರವಾನಗಿ ಪಡೆಯದೇ ಸುಡುಮದ್ದುಗಳನ್ನು ತಯಾರಿಸಿ ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯತನದಿಂದ ಮತ್ತು ಬೇಜಾವಬ್ದಾರಿಯಿಂದ ಅಕ್ರಮವಾಗಿ ದಾಸ್ತಾನಿರಿಸಿದ್ದು, ಸದ್ರಿ ಸುಡುಮದ್ದುಗಳು ಸ್ಪೋಟಗೊಂಡಿರುವುದಾಗಿದೆ.

ಸ್ಫೋಟದ ಪರಿಣಾಮ ಸುತ್ತಮುತ್ತಲಿನ ಮರಗಳು ಸುಟ್ಟು ಹೋಗಿದ್ದು ಯಾವುದೇ ಪ್ರಾಣಹಾನಿ ಸಂಭವಿಸಿರುವುದಿಲ್ಲ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ:58/26, ಕಲಂ:9B Thd explosives act 1884 act & 288 BNS ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದ್ದು, ಆರೋಪಿತ ಅಬ್ದುಲ್‌ ಗಫೂರ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Share News