• Home  
  • ಪುತ್ತೂರು ಸರ್ಕಾರಿ ಆಸ್ಪತ್ರೆಯನ್ನು ಮೆಡಿಕಲ್ ಕಾಲೇಜು ಅಧೀನಕ್ಕೊಳಪಡಿಸಿ: ಸಚಿವ ಯು.ಟಿ. ಖಾದರ್‌ಗೆ ಶಾಸಕ ಅಶೋಕ್ ರೈ ಮನವಿ
- LATEST NEWS

ಪುತ್ತೂರು ಸರ್ಕಾರಿ ಆಸ್ಪತ್ರೆಯನ್ನು ಮೆಡಿಕಲ್ ಕಾಲೇಜು ಅಧೀನಕ್ಕೊಳಪಡಿಸಿ: ಸಚಿವ ಯು.ಟಿ. ಖಾದರ್‌ಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಪುತ್ತೂರಿನ ಸರಕಾರಿ ಆಸ್ಪತ್ರೆಯನ್ನು ಪುತ್ತೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆಯ ಅಧೀನಕ್ಕೊಳಪಡಿಸುವಂತೆ ಶಾಸಕ ಅಶೋಕ್‌ರೈ ಅವರು ರಾಜ್ಯ ಆರೋಗ್ಯ ಸಚಿವ ಯು ಟಿ ಖಾದರ್ ಅವರಿಗೆ ಮನವಿ ಮಾಡಿದ್ದಾರೆ. ಗುರುವಾರ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಯಾದ ಶಾಸಕರು ಈಗಾಗಲೇ ಮೆಡಿಕಲ್ ಕಾಲೇಜು ಪ್ರಾರಂಭಕ್ಕೆ ಎಲ್ಲಾ ಸಿದ್ದತೆಗಳು ನಡೆಯುತ್ತಿದೆ. ೨೦೨೭ ರಲ್ಲಿಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಪ್ರಾರಂಭ ವಾಗಲಿದ್ದು ಅದಕ್ಕೆ ಬೇಕಾದ ಎಲ್ಲಾ ಸಿದ್ದತೆಗಳು ಸಮರೋಪಾದಿಯಲ್ಲಿ ನಡೆಯುತ್ತಿದೆ. ಮೆಡಿಕಲ್ ಕಾಲೇಜು ಕಟ್ಟಡ ನಿರ್ಮಾಣವಾಗುತತಿರುವ ಹಂತದಲ್ಲೇ ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಪ್ರವೇಶಾತಿಯೂ […]

Share News

ಪುತ್ತೂರು: ಪುತ್ತೂರಿನ ಸರಕಾರಿ ಆಸ್ಪತ್ರೆಯನ್ನು ಪುತ್ತೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆಯ ಅಧೀನಕ್ಕೊಳಪಡಿಸುವಂತೆ ಶಾಸಕ ಅಶೋಕ್‌ರೈ ಅವರು ರಾಜ್ಯ ಆರೋಗ್ಯ ಸಚಿವ ಯು ಟಿ ಖಾದರ್ ಅವರಿಗೆ ಮನವಿ ಮಾಡಿದ್ದಾರೆ.

ಗುರುವಾರ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಯಾದ ಶಾಸಕರು ಈಗಾಗಲೇ ಮೆಡಿಕಲ್ ಕಾಲೇಜು ಪ್ರಾರಂಭಕ್ಕೆ ಎಲ್ಲಾ ಸಿದ್ದತೆಗಳು ನಡೆಯುತ್ತಿದೆ. ೨೦೨೭ ರಲ್ಲಿಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಪ್ರಾರಂಭ ವಾಗಲಿದ್ದು ಅದಕ್ಕೆ ಬೇಕಾದ ಎಲ್ಲಾ ಸಿದ್ದತೆಗಳು ಸಮರೋಪಾದಿಯಲ್ಲಿ ನಡೆಯುತ್ತಿದೆ. ಮೆಡಿಕಲ್ ಕಾಲೇಜು ಕಟ್ಟಡ ನಿರ್ಮಾಣವಾಗುತತಿರುವ ಹಂತದಲ್ಲೇ ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಪ್ರವೇಶಾತಿಯೂ ಆರಂಭವಾಗಿ ಕಾಲೇಜು ಪ್ರಾರಂಭವಾಗಲಿದೆ. ಇದಕ್ಕಾಗಿ ಪುತ್ತೂರು ಸರಕಾರಿ ಆಸ್ಪತ್ರೆಯನ್ನು ಮೆಡಿಕಲ್ ಆಸ್ಪತ್ರೆಯ ಅಧೀನಕ್ಕೊಳಪಡಿಸುವಂತೆ ಮನವಿಯಲ್ಲಿ ವಿನಂತಿಸಿದ್ದಾರೆ.

ಸರಕಾರಿ ಆಸ್ಪತ್ರೆಯನ್ನು ಅಧೀನಕ್ಕೊಳಪಡಿಸುವುದರ ಜೊತೆಗೆ ಸ್ಕ್ಯಾನಿಂಗ್, ಬ್ಲಡ್ ಬ್ಯಾಂಕ್, ಎಕ್ಸ್‌ರೇ ಕೇಂದ್ರ, ಮೆಡಿಕಲ್ ಲ್ಯಾಬ್ ಪ್ರಾರಂಭ ಮಾಡುವ ಬಗ್ಗೆಯೂ ಸಚಿವರ ಜೊತೆ ಶಾಸಕರು ಮಾತುಕತೆ ನಡೆಸಿದ್ದಾರೆ. ಶಾಸಕರ ಮನವಿಗೆ ಸಚಿವರು ಸ್ಪಂದಿಸಿದ್ದು ತಕ್ಷಣದ ಕ್ರಮದ ಭರವಸೆಯನ್ನು ನೀಡಿದ್ದಾರೆ.

ಪುತ್ತೂರಿನಲ್ಲಿ ಪ್ರಾರಂಭವಾಗಲಿರುವ ಮೆಡಿಕಲ್ ಕಾಲೇಜಿಗೆ ಸಂಬಂಧಪಟ್ಟಂತೆ ಪುತ್ತೂರು ಸರಕಾರಿ ಆಸ್ಪತ್ರೆಯನ್ನು ಮೆಡಿಕಲ್ ಆಸ್ಪತ್ರೆಯ ಅಧೀನಕ್ಕೊಳ ಪಡಿಸುವಂತೆ ಮನವಿ ಮಾಡಿದ್ದೇನೆ. ಜೊತೆಗೆ ಸ್ಕ್ಯಾನಿಂಗ್, ಬ್ಲಡ್ ಬ್ಯಾಂಕ್, ಎಕ್ಸ್‌ರೇ ಕೇಂದ್ರ, ಮೆಡಿಕಲ್ ಲ್ಯಾಬ್ ಕೂಡಾ ಪ್ರಾರಂಭ ಮಾಡುವಂತೆ ಮನವಿ ಮಾಡಿದ್ದೇನೆ. ಮುಂದಿನ ದಿನಗಳಲ್ಲು ಎಲ್ಲವೂ ಕ್ರಮಬದ್ದವಾಗಿ ನಡೆಯಲಿದೆ. ಮೆಡಿಕಲ್ ಕಾಲೇಜು ವಿಚಾರ ಸಮರೋಪಾದಿಯಲ್ಲಿ ನಡೆಯುತ್ತಿದ್ದು ಪುತ್ತೂರಿನ ಜನತೆಯ ಬಹುವರ್ಷಗಳ ಕನಸು ನಸಾಗುವ ಕಾಲ ಶೀಘ್ರವೇ ಕೂಡಿಬರಲಿದೆ.

Share News