ಆನೆ ದಾಳಿಯಿಂದ ಮಹಿಳೆ ಮೃತಪಟ್ಟ ಪ್ರಕರಣ
ಅರಣ್ಯ ಇಲಾಖೆಯಿಂದ 20 ಲಕ್ಷ ಪರಿಹಾರ
ಪುತ್ತೂರು: ಕೆಲದಿನಗಳ ಹಿಂದೆ ಕೊಳ್ತಿಗೆ ಗ್ರಾಮದ ಕಣಿಯಾರ್ ಎಂಬಲ್ಲಿ ಆನೆ ದಾಳಿಯಿಂದ ಮೃತಪಟ್ಟಿದ್ದ ಕಾರ್ಮಿಕೆ ಸೆಲ್ಲಮ್ಮ ಅವರ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ 20 ಲಕ್ಷ ಪರಿಹಾರ ಮಂಜೂರಾಗಿದೆ.
ಎ.29 ರಂದು ಬೆಳಗ್ಗಿನ ಜಾವ ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದ ವೇಳೆ ದಿಡೀರನೆ ಕಾಡಿನ ಕಡೆಯಿಂದ ಬಂದ ಆನೆ ಸೆಲ್ಲಮ್ಮ ಅವರಮೇಲೆ ದಾಳಿ ನಡೆಸಿ ಅವರನ್ನು ಕೊಂದು ಹಾಕಿತ್ತು.
ಮೃತ ಸೆಲ್ಲಮ್ಮ ಅವರ ಕುಟುಂಬಕ್ಕೆ ಶಾಸಕ ಅಶೋಕ್ ರೈ ಅವರ ಶಿಫಾರಸ್ಸಿನಂತೆ 20 ಲಕ್ಷ ಪರಿಹಾರ ಮಂಜೂರಾಗಿದೆ. ಮಂಜೂರಾತಿ ಪತ್ರವನ್ನು ಅವರ ಪುತದರ ಯೋಗೀಶ್ವರ ಅವರಿಗೆ ಶಾಸಕರು ಹಸ್ತಾಂತರಿಸಿದರು. ಈ ವೇಳೆ ವಲಯ ಅರಣ್ಯಾಧಿಕಾರಿ ಕಿರಣ್ ಬಿ ಎಂ ಉಪಸ್ಥಿತರಿದ್ದರು.