ಪುತ್ತೂರು: ಸಾರ್ವಜನಿಕರ ಸಂಕಷ್ಟಕ್ಕೆ ತಕ್ಷಣ ಸ್ಪಂದಿಸುವ ಮೂಲಕ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಮತ್ತೊಮ್ಮೆ ಮಾನವೀಯತೆ ಮೆರೆದಿದ್ದಾರೆ. ಕಳೆದ ಕೆಲವು ತಿಂಗಳ ಹಿಂದೆ ಜೇನು ನೊಣಗಳ ದಾಳಿಯಿಂದ ಮೃತಪಟ್ಟಿದ್ದ ಬಾಲಕಿ ಜಿಶಾ ಅವರ ಕುಟುಂಬಕ್ಕೆ ಶಾಸಕರು ನೀಡಿದ್ದ ಭರವಸೆಯಂತೆ ಸರ್ಕಾರದಿಂದ ₹5 ಲಕ್ಷ ಮೊತ್ತದ ಪರಿಹಾರವನ್ನು ಕೊಡಿಸಿದ್ದಾರೆ.

ಪುತ್ತೂರಿನ ವಿವೇಕಾನಂದ ಶಾಲೆಯ 2ನೇ ತರಗತಿ ವಿದ್ಯಾರ್ಥಿನಿ ಜಿಶಾ, ಶಾಲೆಯಿಂದ ಮನೆಗೆ ತೆರಳುತ್ತಿದ್ದಾಗ ಸೆಡಿಯಾಪು ಎಂಬಲ್ಲಿ ಜೇನು ನೊಣಗಳ ದಾಳಿಗೆ ಒಳಗಾಗಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಈ ಘಟನೆಯಿಂದ ತೀವ್ರ ಆಘಾತಕ್ಕೊಳಗಾಗಿದ್ದ ಬಡ ಕುಟುಂಬಕ್ಕೆ ಸಾಂತ್ವನ ಹೇಳಿದ್ದ ಶಾಸಕ ಅಶೋಕ್ ರೈ ಅವರು, ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದ್ದರು.
ಶಾಸಕರು ಈ ವಿಷಯವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದರು. ಶಾಸಕರ ನಿರಂತರ ಪರಿಶ್ರಮದ ಫಲವಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿ (CMRF) ಇಂದ ₹5 ಲಕ್ಷ ಆರ್ಥಿಕ ನೆರವು ಬಿಡುಗಡೆಯಾಗಿದೆ. ಇತ್ತೀಚೆಗೆ ನಡೆದ ‘ಅಶೋಕ ಜನಮನ’ ಸಾರ್ವಜನಿಕ ಕುಂದುಕೊರತೆ ಆಲಿಸುವ ಕಾರ್ಯಕ್ರಮದಲ್ಲಿ ಶಾಸಕರು ಸ್ವತಃ ಮೃತ ಬಾಲಕಿಯ ಪೋಷಕರಿಗೆ ಪರಿಹಾರದ ಚೆಕ್ ಹಸ್ತಾಂತರಿಸಿದರು.
ಶಾಸಕರ ಮಾತು:
“ಬಾಲಕಿಯ ಸಾವು ಅತ್ಯಂತ ದುರದೃಷ್ಟಕರ. ಕಳೆದುಕೊಂಡ ಜೀವವನ್ನು ಮರಳಿ ತರಲು ಸಾಧ್ಯವಿಲ್ಲ, ಆದರೆ ಆ ಬಡ ಕುಟುಂಬಕ್ಕೆ ಆರ್ಥಿಕವಾಗಿ ಆಸರೆಯಾಗಬೇಕೆಂಬ ಉದ್ದೇಶದಿಂದ ಶೀಘ್ರವಾಗಿ ಪರಿಹಾರ ಕೊಡಿಸಲಾಗಿದೆ. ಜನರಿಗೆ ಕೊಟ್ಟ ಭರವಸೆಯನ್ನು ಈಡೇರಿಸುವುದು ನನ್ನ ಕರ್ತವ್ಯ” ಎಂದು ಶಾಸಕ ಅಶೋಕ್ ಕುಮಾರ್ ರೈ ಈ ಸಂದರ್ಭದಲ್ಲಿ ತಿಳಿಸಿದರು.