• Home  
  • ಅಶೋಕ ಜನಮನ-2025′ ಕಾರ್ಯಕ್ರಮಕ್ಕೆ ಚಪ್ಪರ ಮುಹೂರ್ತ 1 ಲಕ್ಷ ಮಂದಿಗೆ ವಸ್ತ್ರವಿತರಣೆ; ಅಶೋಕ್ ಕುಮಾ‌ರ್ ರೈ
- DAKSHINA KANNADA - HOME

ಅಶೋಕ ಜನಮನ-2025′ ಕಾರ್ಯಕ್ರಮಕ್ಕೆ ಚಪ್ಪರ ಮುಹೂರ್ತ 1 ಲಕ್ಷ ಮಂದಿಗೆ ವಸ್ತ್ರವಿತರಣೆ; ಅಶೋಕ್ ಕುಮಾ‌ರ್ ರೈ

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈಯವರು ಪ್ರವರ್ತಕರಾಗಿರುವ ರೈ ಎಸ್ಟೇಟ್ ಎಜ್ಯುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್‌ನಿಂದ ಅ.20ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ‘ಅಶೋಕ ಜನಮನ-2025’ ವಸ್ತ್ರವಿತರಣಾ ಕಾರ್ಯಕ್ರಮದ ಚಪ್ಪರ ಮುಹೂರ್ತ ಅ.5ರಂದು ನಡೆಯಿತು.

ಚಪ್ಪರ ಮುಹೂರ್ತ ನೆರವೇರಿಸಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಶಾಸಕ ಅಶೋಕ್ ಕುಮಾ‌ರ್ ರೈಯವರು, ಅಶೋಕ ಜನಮನ-2025 ಕಾರ್ಯಕ್ರಮದಲ್ಲಿ 1 ಲಕ್ಷ ಜನರಿಗೆ ವಸ್ತ್ರ ವಿತರಣೆ ಹಾಗೂ ಊಟದ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸ್ಪೀಕರ್ ಯು.ಟಿ ಖಾದ‌ರ್ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. 20 ಕೌಟರ್‌ಗಳಲ್ಲಿ ಊಟ, 20 ರಿಂದ 30 ಕೌಂಟರ್‌ಗಳಲ್ಲಿ ವಸ್ತವಿತರಣೆ, 50 ಮಂದಿಯಿಂದ ಏಕಕಾಲದಲ್ಲಿ ಲೈವ್ ದೋಸೆ ಸಿದ್ದಪಡಿಸುವ ವ್ಯವಸ್ಥೆಯಿದೆ. ಹಿರಿಯ ನಾಗರಿಕರಿಗೆ, ಮಹಿಳೆಯರಿಗೆ ಪ್ರತ್ಯೇಕ ಕೌಂಟರ್ ಮಾಡಲಾಗುವುದು. 1500ಕ್ಕಿಂತ ಅಧಿಕ ಮಂದಿ ಕಾರ್ಯಕರ್ತರು ಕಾರ್ಯಕ್ರಮದ ಯಶಸ್ಸಿಗೆ ಕೈ ಜೋಡಿಸಲಿದ್ದಾರೆ. ಎಲ್ಲಾ ಗ್ರಾಮಗಳಲ್ಲಿಯೂ ಸಭೆ ನಡೆಸಲಾಗಿದೆ. ಬರುವವರಿಗೆ ಯಾವುದೇ ವಾಹನ ವ್ಯವಸ್ಥೆಯಿಲ್ಲ. ಸ್ವ ಇಚ್ಚೆಯಿಂದ ಜನರು ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಕ್ರೀಡಾಂಗಣದಲ್ಲಿ ಪೂರ್ಣ ಪೆಂಡಾಲ್ ಅಳವಡಿಸಲಾಗುವುದು ಇದರಲ್ಲಿ ಶೇ.50ರಷ್ಟು ಭಾಗದಲ್ಲಿ ಜರ್ಮನ್ ಟೆಂಟ್ ಹಾಗೂ ಮಳೆಯಿಂದ ರಕ್ಷಣೆ ಪಡೆಯಲು ಶೀಟ್ ಅಳವಡಿಸುವ ಮೂಲಕ ವ್ಯವಸ್ಥಿತವಾಗಿ ಮಾಡಲಾಗುವುದು ಎಂದು ತಿಳಿಸಿದರು.

ಟ್ರಸ್ಟ್‌ನ ಕಾರ್ಯಾಧ್ಯಕ್ಷಸುದೇಶ್ ಶೆಟ್ಟಿ ಮಾತನಾಡಿ, ‘ಅಶೋಕ ಜನಮನ-2025’ ಕಾರ್ಯಕ್ರಮ ವಿಜೃಂಭನೆಯಿಂದ ನಡೆಯಲಿದೆ. 1 ಲಕ್ಷಕ್ಕಿಂತ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಸುಮಾರು 1 ಸಾವಿರಕ್ಕೂ ಅಧಿಕ ಮಂದಿ ಯಾವುದೇ ಫಲಾಪೇಕ್ಷೆಯಿಲ್ಲದೆ ಅಶೋಕ್ ರೈಯವರ ಮೇಲಿನ ಪ್ರೀತಿಯಿಂದ ಸ್ವಯಂ ಸೇವಕರಾಗಿ ದುಡಿಯಲಿದ್ದಾರೆ. ಕಾರ್ಯಕ್ರಮದಲ್ಲಿ ಗೂಡು ದೀಪ ಸ್ಪರ್ಧೆಯು ನಡೆಯಲಿದೆ. ವಿಶೇಷವಾಗಿ ದೋಸೆ ಕ್ಯಾಂಪ್ ನಡೆಯಲಿದೆ. ಕಳೆದ ಬಾರಿ 70ರಿಂದ 80 ಸಾವಿರ ಮಂದಿಗೆ ವಸ್ತ್ರವಿತರಿಸಲಾಗಿದೆ. ಈ ಬಾರಿ ಒಂದು ಲಕ್ಷಕ್ಕಿಂತ ಅಧಿಕ ಮಂದಿ ಬಂದರೂ ವಿತರಣೆ ವ್ಯವಸ್ಥೆಯಿದೆ ಎಂದು ಹೇಳಿದರು.

ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಮಾತನಾಡಿ, ಶಾಸಕ ಅಶೋಕ್ ಕುಮಾರ್ ರೈಯವರ ಮನೆಯವರು ಹಿರಿಯರ ಕಾಲದಿಂದಲೂ ಪ್ರತಿ ವರ್ಷ ದೀಪಾವಳಿಗೆ ವಸ್ತ್ರವಿತರಿಸುತ್ತಿದ್ದಾರೆ. ಅದು ಈಗ ಅಕ್ಷಯವಾಗಿ ಮಾರ್ಪಟ್ಟಿದೆ. ಈ ವರ್ಷದ ಕಾರ್ಯಕ್ರಮದಲ್ಲಿ ಶ್ರೀ ಮಹಾಲಿಂಗೇಶ್ವರ ದೇವರ ಮಣ್ಣಲ್ಲಿ ಒಂದು ಲಕ್ಷಕ್ಕಿಂತಲೂ ಅಧಿಕ ಮಂದಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮ ರಾಜ್ಯವೇ ತಿರುಗಿ ನೋಡುವಂತೆ ವ್ಯವಸ್ಥಿತವಾಗಿ ನಡೆಯಲಿ. ಜಾತ್ಯಾತೀತ ಹಾಗೂ ಪಕ್ಷಾತೀತವಾಗಿ ಎಲ್ಲರೂ ಭಾಗವಹಿಸುವ ಮೂಲಕ ಯಶಸ್ವಿಯಾಗಿ ನಡೆಯಲಿ ಎಂದರು.

ಸುಮಾ ಅಶೋಕ್ ಕುಮಾರ್ ರೈ ಮಾತನಾಡಿ, ದೀಪಾವಳಿಗೆ ಪ್ರತಿವರ್ಷದಂತೆ ಈ ವರ್ಷವೂ ವಸ್ತ್ರ ವಿತರಣೆಯ ಅಶೋಕ ಜನ ಮನ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸುವಂತೆ ಹೇಳಿದರು.

ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯಾಧ್ಯಕ್ಷೆ ಚಂದ್ರಪ್ರಭಾ ಗೌಡ ಮಾತನಾಡಿ, ಪುತ್ತೂರಿನ ಮಾಣಿಕ್ಯದಂತಿರುವ ಶಾಸಕ ಅಶೋಕ್ ಕುಮಾರ್ ರೈಯವರ ನೇತೃತ್ವದಲ್ಲಿ ದೀಪಾವಳಿಗೆ ನಡೆಯುವ ಅಶೋಕ ಜನಮನ ಕಾರ್ಯಕ್ರಮದಲ್ಲಿ ಯಾವುದೇ ಪಕ್ಷ, ಜಾತಿ, ಮತ, ಬೇಧವಿಲ್ಲದೇ ಎಲ್ಲರೂ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಹೇಳಿದರು

ನಗರ ಯೋಜನಾ ಪ್ರಾಧಿಕಾರದ ಸದಸ್ಯರಾದ ನಿಹಾಲ್ ಶೆಟ್ಟಿ, ಲ್ಯಾನ್ಸಿ ಮಸ್ಕರೇನಸ್, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ, ಉದ್ಯಮಿ ಶಿವರಾಮ ಆಳ್ವ, ಕೆಪಿಸಿಸಿ ಸಂಯೋಜಕ ಹೇಮನಾಥ ಶೆಟ್ಟಿ ಕಾವು, ಜಿ.ಪಂ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ ಕಾವು, ಕೆಯ್ಯರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎ.ಕೆ ಜಯರಾಮ ರೈ, ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಮೋನಪ್ಪ ಪೂಜಾರಿ ಕೆರೆಮಾರು, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ದಯಾನಂದ ರೈ ಕೋರ್ಮಂಡ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎ.ಎಂ ಪ್ರವೀಣಚಂದ್ರ ಆಳ್ವ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸಮಿತಿ ಅಧ್ಯಕ್ಷ ಅಧ್ಯಕ್ಷ ರಾಧಾಕೃಷ್ಣ ನ್ಯಾಕ್, ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯೆ ನಳಿನಿ ಪಿ ಶೆಟ್ಟಿ, ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಶಿವಪ್ರಸಾದ್ ಮಠಂತಬೆಟ್ಟು, ಕುಂಜೂರು ಶ್ರೀ ದುರ್ಗಾಪರಮೇಶ್ವರಿ ರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಅಭಿಲಾಷ್ ರೈ ಬಂಗಾರಡ್ಕ, ಕೋಡಿಂಬಾಡಿ ಗ್ರಾ.ಪಂ ಅಧ್ಯಕ್ಷೆ ಮಲ್ಲಿಕಾ ಅಶೋಕ್ ಪೂಜಾರಿ, ಆರ್ಯಾಪು ಗ್ರಾ.ಪಂ.ಸದಸ್ಯ ಪವಿತ್ರ ರೈ, ಯೋಗೀಶ್ ಸಾಮಾನಿ, ರಂಜಿತ್ ಬಂಗೇರ, ಕೃಷ್ಣಪ್ರಸಾದ್, ನಯನಾ ರೈ ಸಹಿತ ಹಲವು ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Share News

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678