canaratvnews

ಮಂಗಳೂರು ಮಹಾನಗರ ಪಾಲಿಕೆ ದೇರೆಬೈಲ್ ಕೊಟ್ಟಾರ ಕ್ರಾಸ್1ನೇಅಡ್ಡರಸ್ತೆಯ ಅಭಿವೃದ್ಧಿ ಕಾಮಗಾರಿಯ ಚಾಲನೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 24ನೇ ದೇರೆಬೈಲ್ ದಕ್ಷಿಣ ವಾರ್ಡಿನ ಕೊಟ್ಟಾರ ಕ್ರಾಸ್ 1ನೇ ಅಡ್ಡರಸ್ತೆಯ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು.

ಈ ವೇಳೆ ಮಾತನಾಡಿದ ಶಾಸಕರು, ಇಲ್ಲಿನ ಸ್ಥಳೀಯರ ಹಲವು ಸಮಯಗಳ ಬೇಡಿಕೆಯನ್ನು ಪರಿಗಣಿಸಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 2022-23 ನೇ ಸಾಲಿನ ಲೋಕೋಪಯೋಗಿ ಇಲಾಖೆಯಿಂದ ವಿಶೇಷ ಅನುದಾನವನ್ನು ಮಂಜೂರು ಮಾಡಲಾಗಿತ್ತು. ಇದೀಗ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದ್ದು ಶೀಘ್ರದಲ್ಲಿ ಕಾಮಗಾರಿ ಮುಗಿದು ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಾಗಲಿದೆ ಎಂದರು.


ವಾರ್ಡ್ ಅಧ್ಯಕ್ಷರಾದ ಸುಧಾಕರ್ ಬಿ, ಸ್ಥಳೀಯ ಬಿಜೆಪಿ ಮುಖಂಡರಾದ ಚರಿತ್ ಪೂಜಾರಿ, ಸುನಂದ, ಶ್ರೀನಿವಾಸ್ ಪೈ, ಅನಂತ್ ಶಣೈ, ಚಂದ್ರರಾಜ್, ರಾಕೇಶ್ ಸೇರಿದಂತೆ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

Share News
Exit mobile version