• Home  
  • ರಸ್ತೆಯ ಹೊಂಡಗಳನ್ನು ದುರಸ್ತಿಗೊಳಿಸಿ:- ಅಧಿಕಾರಿಗಳಿಗೆ ಶಾಸಕ ಕಾಮತ್ ಸೂಚನೆ
- DAKSHINA KANNADA - HOME

ರಸ್ತೆಯ ಹೊಂಡಗಳನ್ನು ದುರಸ್ತಿಗೊಳಿಸಿ:- ಅಧಿಕಾರಿಗಳಿಗೆ ಶಾಸಕ ಕಾಮತ್ ಸೂಚನೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ನಗರದ ಹಲವೆಡೆ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಕಸದ ಸಮಸ್ಯೆ ವಿಪರೀತವಾಗಿರುವುದು, ಬೀದಿ ದೀಪ, ಸೇರಿದಂತೆ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮಕೈಗೊಳ್ಳುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.


ಹೊಂಡಗಳಿಂದಾಗಿ ವಾಹನಗಳು ಅಪಘಾತಕ್ಕೀಡಾಗಿ ಸಾರ್ವಜನಿಕರು ತೊಂದರೆ ಅನುಭವಿಸಿರುವ ಪ್ರಕರಣಗಳು ನಡೆದಿದೆ. ವಿಪರೀತ ಮಳೆಯಿದ್ದರೂ ತಾತ್ಕಾಲಿಕವಾಗಿಯಾದರೂ ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳಬೇಕು. ನಗರದಲ್ಲಿ ಕಸದ ಸಮಸ್ಯೆ ವಿಪರೀತವಾಗಿದ್ದು, ಗಾಂಧಿನಗರದ ಶಾಲೆಯ ಹತ್ತಿರ, ಮರೋಳಿಯ ಬಸ್ ನಿಲ್ದಾಣ, ಹೀಗೆ ಅನೇಕ ಕಡೆಗಳಿಂದ ದೂರುಗಳು ಬರುತ್ತಿವೆ. ಒಂದು ಕಾಲದಲ್ಲಿ ಇಡೀ ದೇಶಕ್ಕೆ ಸ್ವಚ್ಛತೆಗೆ ಬ್ರಾಂಡ್ ಆಗಿದ್ದ ಮಂಗಳೂರಿನಲ್ಲೇ ಇಂದು ರಸ್ತೆಗಳಲ್ಲಿ ಕಸ ಬಿದ್ದಿದೆ. ಅಲ್ಲಲ್ಲಿ ಬೀದಿ ದೀಪಗಳು ಸುಸ್ಥಿತಿಯಲ್ಲಿಲ್ಲದ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು ಇವೆಲ್ಲವನ್ನೂ ಗಂಭೀರವಾಗಿ ಪರಿಗಣಿಸುವಂತೆ ಶಾಸಕರು ಸೂಚನೆ ನೀಡಿದರು. ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ನಾಳೆಯಿಂದಲೇ ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.


ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಅಭಿವೃದ್ಧಿ ದೃಷ್ಟಿಯಲ್ಲಿ ಮಂಗಳೂರು ಮಹಾನಗರ ಪಾಲಿಕೆಗೆ ಯಾವುದೇ ಅನುದಾನ ಬಂದಿಲ್ಲ. ಕಳೆದೆರಡು ವರ್ಷಗಳಿಂದ ಪ್ರಾಕೃತಿಕ ವಿಕೋಪದಿಂದಾಗಿರುವ ಅನಾಹುತಕ್ಕೆ ರಾಜ್ಯ ಸರ್ಕಾರದಿಂದ ಬರಬೇಕಿದ್ದ ಪರಿಹಾರ ಧನವೂ ಬಂದಿಲ್ಲ. ಹೀಗಾದರೆ ಕ್ಷೇತ್ರದಲ್ಲಿ ಆಗಬೇಕಿರುವ ತುರ್ತು ಕಾಮಗಾರಿಗಳು ನಡೆಯುವುದು ಹೇಗೆ? ಕಾಂಗ್ರೆಸ್ ಸರ್ಕಾರ ರಾಜ್ಯದ ಆಡಳಿತದಲ್ಲಿ ವೈಫಲ್ಯ ಅನುಭವಿಸಿದ್ದು ಮಾತ್ರವಲ್ಲದೇ ನಮ್ಮ ಮಂಗಳೂರನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ ಎಂದು ಶಾಸಕರು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದರು.

Share News

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678