• Home  
  • *ಮಂಗಳೂರಿನ ಕದ್ರಿ, ಶಕ್ತಿನಗರದಲ್ಲಿ ಚಿರತೆ ಆತಂಕ: ಶಾಸಕ ವೇದವ್ಯಾಸ ಕಾಮತ್ ಅರಣ್ಯಾಧಿಕಾರಿಗಳೊಂದಿಗೆ ತುರ್ತು ಸಭೆ*
- DAKSHINA KANNADA - HOME

*ಮಂಗಳೂರಿನ ಕದ್ರಿ, ಶಕ್ತಿನಗರದಲ್ಲಿ ಚಿರತೆ ಆತಂಕ: ಶಾಸಕ ವೇದವ್ಯಾಸ ಕಾಮತ್ ಅರಣ್ಯಾಧಿಕಾರಿಗಳೊಂದಿಗೆ ತುರ್ತು ಸಭೆ*

ಮಂಗಳೂರು: ನಗರದ ಕದ್ರಿ ಮತ್ತು ಶಕ್ತಿನಗರದ ವಸತಿ ಪ್ರದೇಶಗಳಲ್ಲಿ ಇತ್ತೀಚೆಗೆ ಚಿರತೆ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಭೀತಿ ಸೃಷ್ಟಿಸಿರುವ ಹಿನ್ನೆಲೆಯಲ್ಲಿ, ಶಾಸಕ ವೇದವ್ಯಾಸ ಕಾಮತ್ ಅವರು ಅರಣ್ಯಾಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಇಲಾಖೆ ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅವರು ಸಮಗ್ರ ಮಾಹಿತಿ ಪಡೆದರು. ಬೋನು ಅಳವಡಿಕೆ: ಕದ್ರಿ ಕೈಬಟ್ಟಲ್ ಹಾಗೂ ಶಕ್ತಿನಗರದ ಕೋರ್ಡೆಲ್‌ ಪ್ರದೇಶದ ಸಿಸಿಟಿವಿಗಳಲ್ಲಿ ಚಿರತೆ ಸಂಚಾರ ಪತ್ತೆಯಾಗಿದ್ದು, ಅದನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಈಗಾಗಲೇ ಆಯಕಟ್ಟಿನ ಸ್ಥಳಗಳಲ್ಲಿ ಬೋನುಗಳನ್ನು ಇರಿಸಿದೆ. […]

Share News

ಮಂಗಳೂರು: ನಗರದ ಕದ್ರಿ ಮತ್ತು ಶಕ್ತಿನಗರದ ವಸತಿ ಪ್ರದೇಶಗಳಲ್ಲಿ ಇತ್ತೀಚೆಗೆ ಚಿರತೆ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಭೀತಿ ಸೃಷ್ಟಿಸಿರುವ ಹಿನ್ನೆಲೆಯಲ್ಲಿ, ಶಾಸಕ ವೇದವ್ಯಾಸ ಕಾಮತ್ ಅವರು ಅರಣ್ಯಾಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಇಲಾಖೆ ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅವರು ಸಮಗ್ರ ಮಾಹಿತಿ ಪಡೆದರು.


ಬೋನು ಅಳವಡಿಕೆ: ಕದ್ರಿ ಕೈಬಟ್ಟಲ್ ಹಾಗೂ ಶಕ್ತಿನಗರದ ಕೋರ್ಡೆಲ್‌ ಪ್ರದೇಶದ ಸಿಸಿಟಿವಿಗಳಲ್ಲಿ ಚಿರತೆ ಸಂಚಾರ ಪತ್ತೆಯಾಗಿದ್ದು, ಅದನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಈಗಾಗಲೇ ಆಯಕಟ್ಟಿನ ಸ್ಥಳಗಳಲ್ಲಿ ಬೋನುಗಳನ್ನು ಇರಿಸಿದೆ.
ಹಗಲು-ರಾತ್ರಿ ಗಸ್ತು: ಚಿರತೆ ಸಂಚರಿಸಿದ ಭಾಗಗಳಲ್ಲಿ ನಿರಂತರ ನಿಗಾ ಇರಿಸಲು ಅರಣ್ಯ ಇಲಾಖೆಯ ವಿಶೇಷ ತಂಡವನ್ನು ಗಸ್ತು ಕಾರ್ಯಕ್ಕೆ ನಿಯೋಜಿಸಲಾಗಿದೆ.
ಇಲಾಖೆಯ ಅಂದಾಜು: ಪ್ರಸ್ತುತ ಚಿರತೆಯು ಜನವಸತಿ ಪ್ರದೇಶದಿಂದ ಮರಳಿ ಕಾಡು ಸೇರಿರುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ. ಆದರೂ ಮುನ್ನೆಚ್ಚರಿಕೆಯಾಗಿ ಕಾರ್ಯಾಚರಣೆ ಮುಂದುವರಿಯಲಿದೆ.

ಸಾರ್ವಜನಿಕರಿಗೆ ಮನವಿ:
ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್ ಮಾತನಾಡಿ, “ಚಿರತೆ ಅಥವಾ ಯಾವುದೇ ವನ್ಯಜೀವಿಗಳು ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣ ಅರಣ್ಯ ಇಲಾಖೆಯ ಉಚಿತ ಸಹಾಯವಾಣಿ ಸಂಖ್ಯೆ 1926 ಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕು. ಇದು ತ್ವರಿತ ಕಾರ್ಯಾಚರಣೆಗೆ ಸಹಕಾರಿಯಾಗುತ್ತದೆ” ಎಂದು ವಿನಂತಿಸಿದರು.
“ಆಹಾರ ಅರಸಿ ಕಾಡುಪ್ರಾಣಿಗಳು ನಾಡಿಗೆ ಬರುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಜನರ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು ಹಾಗೂ ಅರಣ್ಯ ಸಿಬ್ಬಂದಿಗಳು ಸಹ ಎಚ್ಚರಿಕೆಯಿಂದ ಕಾರ್ಯಾಚರಣೆ ನಡೆಸಬೇಕು” ಎಂದು ಶಾಸಕ ವೇದವ್ಯಾಸ ಕಾಮತ್ ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

Share News