• Home  
  • ಮಂಗಳೂರಿನಲ್ಲಿ   ಮಳೆಯಿಂದ ಪ್ರವಾಹ ಪರಿಸ್ಥಿತಿ ತಲೆದೋರಿದ್ದ ಸ್ಥಳಗಳಿಗೆ ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಭೇಟಿ
- DAKSHINA KANNADA

ಮಂಗಳೂರಿನಲ್ಲಿ   ಮಳೆಯಿಂದ ಪ್ರವಾಹ ಪರಿಸ್ಥಿತಿ ತಲೆದೋರಿದ್ದ ಸ್ಥಳಗಳಿಗೆ ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಭೇಟಿ

ಮಂಗಳೂರು ಜೂನ್ 26 ಮಂಗಳೂರಿನಲ್ಲಿ  ಇತ್ತೀಚಿಗೆ ಸುರಿದ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ತಲೆದೋರಿದ್ದ ಸ್ಥಳಗಳಿಗೆ ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಭೇಟಿ ನೀಡಿದರು. 

30ನೇ ವಾರ್ಡ್ ಕೊಡಿಯಾಲ್ ಬೈಲ್ ಪೂರ್ವ ರಸ್ತೆ, ಬಲ್ಲಾಳ್ ಬಾಗ್ ಬ್ರಿಡ್ಜ್, ವೆಟ್ ವೆಲ್ ಇರುವ ಪ್ರದೇಶ, ಮೊದಲಾದ ಸ್ಥಳಗಳಿಗೆ ಭೇಟಿ ನೀಡಿದ ಶಾಸಕರು, ಅಲ್ಲಿ ಉಂಟಾಗಿರುವ ನೆರೆ ಪರಿಸ್ಥಿತಿಗೆ ಕಾರಣ, ತುರ್ತಾಗಿ ನಡೆಯಬೇಕಿರುವ ಕಾರ್ಯ, ಭವಿಷ್ಯದಲ್ಲಿ ಪ್ರವಾಹ ಮರುಕಳಿಸದಂತೆ ಪರಿಹಾರ ಕ್ರಮ ಇತ್ಯಾದಿ ವಿಷಯಗಳ ಬಗ್ಗೆ ಸ್ಥಳೀಯರ ಅಭಿಪ್ರಾಯದ ಮೇರೆಗೆ ಕೂಡಲೇ ಕ್ರಮಕೈಗೊಳ್ಳುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.


ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸುಮಾರು 75 ಕೋಟಿ ವಿಶೇಷ ಅನುದಾನದಲ್ಲಿ ಕ್ಷೇತ್ರದ ಹಲವು ರಾಜಕಾಲುವೆಗಳಿಗೆ ತಡೆಗೋಡೆ ನಿರ್ಮಾಣ ಮಾಡಿದ್ದು ಬಿಟ್ಟರೆ, ಪ್ರಸ್ತುತ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಇಲ್ಲಿನ ಸಣ್ಣಪುಟ್ಟ ತುರ್ತುಕ್ರಮಕ್ಕೂ ಬಿಡಿಗಾಸು ದೊರೆಯುತ್ತಿಲ್ಲ. ಇದರಿಂದಾಗಿ ವಿಶೇಷವಾಗಿ ಮಳೆಗಾಲದ ಸಮಯದಲ್ಲಿ ಸ್ಥಳೀಯ ಜನತೆ ತೀವ್ರ ತೊಂದರೆ ಅನುಭವಿಸುತ್ತಿದ್ದು ಈ ಎಲ್ಲದರ ಬಗ್ಗೆ ಮುಂಬರುವ ಅಧಿವೇಶನದಲ್ಲಿ ಪ್ರಸ್ತಾಪಿಸಿ ಶಾಶ್ವತ ಪರಿಹಾರಕ್ಕೆ ಸರ್ಕಾರದ ಮೇಲೆ ಒತ್ತಡ ಹೇರುತ್ತೇನೆಂದು ಶಾಸಕರು ಹೇಳಿದರು. 

ಈ ಸಂದರ್ಭದಲ್ಲಿ ಮಾಜಿ ಮಾಜಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಪ್ರಮುಖರಾದ ವಿವೇಕ್, ಪ್ರಶಾಂತ್ ಆಳ್ವ, ಸೇರಿದಂತೆ ಅನೇಕ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Share News

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678