ಮಂಗಳೂರು: ಜುಲೈ 26. ರಾಷ್ಟ್ರೀಯ ಶಾಸಕರ ಸಮಾವೇಶ ಸಂಸ್ಥೆಯ (NLC) ಆಶ್ರಯದಲ್ಲಿ ಅಮೆರಿಕಾದ ಬೋಸ್ಟನ್ ನಲ್ಲಿ ಕರ್ನಾಟಕ ವಿಧಾನಸಭಾ ಅಧ್ಯಕ್ಷರ (ಸ್ಪೀಕರ್) ನೇತೃತ್ವದಲ್ಲಿ ನಡೆಯುವ ಅಂತರರಾಷ್ಟ್ರೀಯ ಮಟ್ಟದ ವಿಧಾಯಕರುಗಳ ಸಮ್ಮೇಳನಕ್ಕೆ ವಿಧಾನ ಪರಿಷತ್ ಶಾಸಕರಾದ ಶ್ರೀ ಐವನ್ ಡಿ;ಸೋಜಾರವರು ಆಯ್ಕೆಯಾಗಿದ್ದಾರೆ.
ಕರ್ನಾಟಕದ ವಿಧಾನಸಭೆಯ 224 ಸದಸ್ಯರುಗಳಲ್ಲಿ 14 ಶಾಸಕರು ಆಯ್ಕೆಯಾಗಿದ್ದು ಶ್ರೀ ಐವನ್ ಡಿ;ಸೋಜಾರವರು ಆಯ್ಕೆಯಾಗಿದ್ದಾರೆ. ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ನೀತಿ ನಿರೂಪಕರು ಈ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದು
ಈ ಶೃಂಗ ಸಭೆಯಲ್ಲಿ ಪ್ರಜಾತಂತ್ರ ಗಟ್ಟಿಗೊಳಿಸುವಿಕೆ ಶಾಸನ ಸಭೆಗಳ ಪಕ್ಷಾತೀತ ನಿರ್ವಹಣೆ ಸೇರಿದಂತೆ ಹಲವು ವಿಷಯಗಳ ವಿಚಾರ ಸಂಕೀರ್ಣ ಸಂವಾದಗಳು ನಡೆಯಲಿದೆ.