LATEST NEWS

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ಮೂವರು ನ್ಯಾಯಧೀಶರ ಸಮಿತಿ ರಚನೆಗೆ ಕೆ. ಮೋನಪ್ಪ ಭಂಡಾರಿ ಸ್ವಾಗತ

ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸುವ ಕುರಿತು ಪರಿಶೀಲಿಸಲು ಕರ್ನಾಟಕ ಹೈಕೋರ್ಟ್‌ನ ಗೌರವಾನ್ವಿತ ಮುಖ್ಯ ನ್ಯಾಯಧೀಶರು ಮೂವರು ನ್ಯಾಯಧೀಶರನ್ನೊಳಗೊಂಡ ಸಮಿತಿಯನ್ನು ರಚಿಸಿ ಆದೇಶ ಹೊರಡಿಸಿರುವುದನ್ನು ಹೈಕೋರ್ಟ್ ಪೀಠ ಹೋರಾಟ ಸಮಿತಿಯ ಸದಸ್ಯರಾದ ಕೆ. ಮೋನಪ್ಪ ಭಂಡಾರಿ ಅವರು ಸ್ವಾಗತಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕೆಂದು ಹೋರಾಟ ಸಮಿತಿಯು ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳ ಸಹಕಾರದೊಂದಿಗೆ ನಿರಂತರ ಪ್ರಯತ್ನ ನಡೆಸುತ್ತಿದೆ. ಈ ಹಿಂದೆ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳು, ಕಾನೂನು ಸಚಿವರು ಹಾಗೂ ಮಾಜಿ ಮುಖ್ಯಮಂತ್ರಿಗಳು ಸರ್ಕಾರದ ವತಿಯಿಂದ ಗೌರವಾನ್ವಿತ ಹೈಕೋರ್ಟ್ ಮುಖ್ಯ ನ್ಯಾಯಧೀಶರಿಗೆ ಪತ್ರ ಬರೆದು ಸಕಾರಾತ್ಮಕವಾಗಿ ಸ್ಪಂದಿಸಿದ್ದರು” ಎಂದು ನೆನಪಿಸಿಕೊಂಡಿದ್ದಾರೆ.

“ಇದೀಗ ಗೌರವಾನ್ವಿತ ಮುಖ್ಯ ನ್ಯಾಯಧೀಶರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಪೀಠ ಸ್ಥಾಪನೆಯ ಬಗ್ಗೆ ಪರಾಂಬರಿಸಲು ಸಮಿತಿ ರಚಿಸಿ ರುವುದು ಅತ್ಯಂತ ಸಂತೋಷದ ಸಂಗತಿಯಾಗಿದೆ. ಹೋರಾಟ ಸಮಿತಿಯ ಪರವಾಗಿ ಗೌರವಾನ್ವಿತ ಮುಖ್ಯ ನ್ಯಾಯಧೀಶರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಸಮಿತಿಯೊಂದಿಗೆ ಕೈಜೋಡಿಸಿದ ಎಲ್ಲರಿಗೂ ಕೃತಜ್ಞತೆಗಳು. ಮಂಗಳೂರಿನಲ್ಲಿ ಶೀಘ್ರದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಲಿ ಎಂದು ಹೈಕೋರ್ಟ್ ಪೀಠ ಹೋರಾಟ ಸಮಿತಿಯ ಸದಸ್ಯರಾದ ಕೆ. ಮೋನಪ್ಪ ಭಂಡಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share News