• Home  
  • 6 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಳ್ಳಲಿರುವ ಸುಳ್ಯದ ಎರಡು ಪ್ರಮುಖ ರಸ್ತೆಗಳಿಗೆ ಗುದ್ದಲಿಪೂಜೆ ನೆರವೇರಿಸಿದ ಸಂಸದ ಕ್ಯಾ. ಚೌಟ
- DAKSHINA KANNADA - HOME - LATEST NEWS - STATE

6 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಳ್ಳಲಿರುವ ಸುಳ್ಯದ ಎರಡು ಪ್ರಮುಖ ರಸ್ತೆಗಳಿಗೆ ಗುದ್ದಲಿಪೂಜೆ ನೆರವೇರಿಸಿದ ಸಂಸದ ಕ್ಯಾ. ಚೌಟ

ಸುಳ್ಯ: ಕೇಂದ್ರ ಸರ್ಕಾರದ ರಸ್ತೆ ಹಾಗೂ ಮೂಲಸೌಕರ್ಯ ನಿಧಿ(ಸಿಆರ್ ಐಎಫ್)ಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನ ಸಭಾ ಕ್ಷೇತ್ರದ ಎರಡು ಪ್ರಮುಖ ರಸ್ತೆಗಳನ್ನು ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಗಳಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನೇತೃತ್ವದಲ್ಲಿ ಇಂದು ಗುದ್ದಲಿಪೂಜೆ ನೆರವೇರಿಸಲಾಯಿತು.

ಸಿಆರ್ ಐಎಫ್ ಅನುದಾನದಡಿ ಸುಳ್ಯ ತಾಲೂಕಿನ ನಿಂತಿಕಲ್ಲು- ಬೆಳ್ಳಾರೆ ರಸ್ತೆಯನ್ನು ಸುಮಾರು 3.72 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಈ ರಸ್ತೆಯಲ್ಲಿ ಒಟ್ಟು ಸುಮಾರು 6.20 ಕಿಮೀ. ಮಾರ್ಗವನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಈ ಕಾಮಗಾರಿಗಳಿಗೆ ಮಂಗಳವಾರ ಸಂಸದ ಕ್ಯಾ. ಚೌಟ ಅವರು ನಿಂತಿಕಲ್ಲು ಜಂಕ್ಷನ್ ನಲ್ಲಿ ಗುದ್ದಲಿಪೂಜೆ ನೆರವೇರಿಸಿದ್ದಾರೆ. ಅದೇ ರೀತಿ ಕೇಂದ್ರ ಸರ್ಕಾರದ ಸಿಆರ್ ಐಎಫ್ ನಿಧಿಯಡಿ ಸುಳ್ಯ-ಪೈಚಾರ್-ಬೆಳ್ಳಾರೆಯ ರಸ್ತೆಯು 2.28 ಕೋಟಿ. ರೂ. ವೆಚ್ಚದಲ್ಲಿ ಅಭಿವೃದ್ಧಿಯಾಗಲಿದೆ. ಈ ರಸ್ತೆಯು ಒಟ್ಟು 3.80 ಕಿ.ಮಿ ಉನ್ನತಿಕರಣಗೊಳ್ಳಲಿದೆ. ಈ ಹಿನ್ನಲೆಯಲ್ಲಿ ಇಂದು ನಿಂತಿಕಲ್ಲಿನಲ್ಲಿ ಕ್ಯಾ. ಚೌಟ ಅವರ ನೇತೃತ್ವದಲ್ಲಿ ಕಾಮಗಾರಿ ಆರಂಭಿಸುವುದಕ್ಕೆ ಗುದ್ದಲಿಪೂಜೆ ನೆರವೇರಿಸಲಾಗಿದೆ.

ನಿಂತಿಕಲ್ಲು ಪುತ್ತೂರು-ಸುಳ್ಯವನ್ನು ಸಂಪರ್ಕಿಸುವ ಗಡಿಭಾಗವಾಗಿದ್ದು, ಸುಳ್ಯ-ಪೈಚಾರ್-ಬೆಳ್ಳಾರೆ- ನಿಂತಿಕಲ್ಲು ರಸ್ತೆ ಅಭಿವೃದ್ಧಿಗೊಂಡರೆ ರಾಜ್ಯ ಹೆದ್ದಾರಿಗಳು ಮತ್ತು ಜಿಲ್ಲಾ ಮುಖ್ಯ ರಸ್ತೆಗಳಿಗೆ ಉತ್ತಮ ಸಂಪರ್ಕವನ್ನು ಒದಗಿಸಿ, ಈ ಪ್ರದೇಶದ ಒಟ್ಟಾರೆ ಸಂಪರ್ಕ ಜಾಲವನ್ನು ಬಲಪಡಿಸುತ್ತದೆ. ಜೊತೆಗೆ ಪುತ್ತೂರು, ಸುಬ್ರಹ್ಮಣ್ಯ , ಮಂಗಳೂರು, ಮಡಿಕೇರಿ ಸಂಪರ್ಕ ಸಾಧಿಸಲು ಈ ರಸ್ತೆ ಸಹಾಯವಾಗಿದೆ.

ಈ ಕಾರ್ಯಕ್ರಮದಲ್ಲಿ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ, ಸುಳ್ಯ ಬಿಜೆಪಿ ಮಂಡಲದ ಅಧ್ಯಕ್ಷ ವೆಂಕಟ್ ವಳಲಂಬೆ, ಪಂಚಾಯತ್ ಅಧ್ಯಕ್ಷರು, ಅಧಿಕಾರಿಗಳು ಬಿಜೆಪಿ ಸ್ಥಳೀಯ ಮುಖಂಡರು ಮತ್ತು ಸ್ಥಳೀಯರು ಕಾರ್ಯಕ್ರಮದ ವೇಳೆ ಉಪಸ್ಥಿತರಿದ್ದರು.

Share News

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678