• Home  
  • ಮುಲ್ಕಿ ಜೋಡಿ ಕೊಲೆ ಪ್ರಕರಣ: ಆರೋಪಿ ಅಲ್ಫೋನ್ಸ್ ಸಲ್ದಾನಗೆ ಜೀವಾವಧಿ ಶಿಕ್ಷೆ
- DAKSHINA KANNADA - HOME - LATEST NEWS

ಮುಲ್ಕಿ ಜೋಡಿ ಕೊಲೆ ಪ್ರಕರಣ: ಆರೋಪಿ ಅಲ್ಫೋನ್ಸ್ ಸಲ್ದಾನಗೆ ಜೀವಾವಧಿ ಶಿಕ್ಷೆ

ಮಂಗಳೂರು: ಮುಲ್ಕಿ ತಾಲೂಕಿಮ ಏಳಿಂಜೆ ಗ್ರಾಮದ ಮುತ್ತಯ್ಯಕೆರೆ ಆಗಿಂದಕಾಡು ಎಂಬಲ್ಲಿ ನಡೆದ ಜೋಡಿಕೊಲೆ ಪ್ರಕರಣದ ಆರೋಪಿ ಅಲ್ಫೋನ್ಸ್ ಸಲ್ದಾನ ಎಂಬಾತನಿಗೆ 2ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ಜೀವಾವಧಿ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದ್ದಾರೆ. ಘಟನೆ ವಿವರ ಮುಲ್ಕಿ ತಾಲೂಕು ಏಳಿಂಜೆ ಗ್ರಾಮದ ಮುತ್ತಯ್ಯಕೆರೆ ಆಗಿಂದಕಾಡು ಎಂಬಲ್ಲಿ  2020ರ ಏ.29 ರಂದು ಆರೋಪಿ ಆಲ್ಫೋನ್ಸ್ ಸಲ್ದಾಣನು ತನ್ನ ನೆರೆಕರೆ ಮನೆಯ ವಿನ್ಸಿ ಯಾನೆ ವಿನ್ಸೆಂಟ್ ಡಿ.ಸೋಜಾನನ್ನು ಮರದ ಗೆಲ್ಲು ಕಡಿಯುವ ವಿಚಾರಕ್ಕೆ ಸಂಬಂಧಿಸಿದಂತೆ […]

Share News

ಮಂಗಳೂರು: ಮುಲ್ಕಿ ತಾಲೂಕಿಮ ಏಳಿಂಜೆ ಗ್ರಾಮದ ಮುತ್ತಯ್ಯಕೆರೆ ಆಗಿಂದಕಾಡು ಎಂಬಲ್ಲಿ ನಡೆದ ಜೋಡಿಕೊಲೆ ಪ್ರಕರಣದ ಆರೋಪಿ ಅಲ್ಫೋನ್ಸ್ ಸಲ್ದಾನ ಎಂಬಾತನಿಗೆ 2ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ಜೀವಾವಧಿ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದ್ದಾರೆ.

ಘಟನೆ ವಿವರ

ಮುಲ್ಕಿ ತಾಲೂಕು ಏಳಿಂಜೆ ಗ್ರಾಮದ ಮುತ್ತಯ್ಯಕೆರೆ ಆಗಿಂದಕಾಡು ಎಂಬಲ್ಲಿ  2020ರ ಏ.29 ರಂದು ಆರೋಪಿ ಆಲ್ಫೋನ್ಸ್ ಸಲ್ದಾಣನು ತನ್ನ ನೆರೆಕರೆ ಮನೆಯ ವಿನ್ಸಿ ಯಾನೆ ವಿನ್ಸೆಂಟ್ ಡಿ.ಸೋಜಾನನ್ನು ಮರದ ಗೆಲ್ಲು ಕಡಿಯುವ ವಿಚಾರಕ್ಕೆ ಸಂಬಂಧಿಸಿದಂತೆ ವಿನ್ಸಿ ಯಾನೆ ವಿನ್ಸೆಂಟ್ ಡಿ.ಸೋಜಾನನ್ನು ರಾಜಿ ಪಂಚಾಯತಿಕೆ ಮಾಡುವ ನೆಪದಲ್ಲಿ ತನ್ನ ಮನೆಗೆ ಕರೆಸಿ ಗಲಾಟೆ ಮಾಡಿ ಚೂರಿಯಿಂದ ತಿವಿದು ಕೊಲೆ ಮಾಡಿದ್ದನು.

ಈ ವೇಳೆ ರಕ್ಷಿಸಲು ಧಾವಿಸಿ ಬಂದ ವಿನ್ಸಿ ಯಾನೆ ವಿನ್ಸೆಂಟ್ ಡಿ.ಸೋಜಾನ ಪತ್ನಿ ಶ್ರೀಮತಿ ಹೆಲೆನ್ ಡಿ.ಸೋಜಾ ಯಾನೆ ಹೆಲೆನ್ ರೋಸಿ ರೋಡ್ರಿಗಸ್ ಳನ್ನು ಅಟ್ಟಾಡಿಸಿ ಚೂರಿಯಿಂದ ಅಮಾನುಷವಾಗಿ ತಿವಿದು ಕೊಲೆಗೈದ್ದನು. ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 31/2020 ಕಲಂ 341, 504, 506, 302 ಐಪಿಸಿ ರಂತೆ ಪ್ರಕರಣ ದಾಖಲಾಗಿತ್ತು.

ಈ ವೇಳೆ ಅಂದಿನ ಮುಲ್ಕಿ ಠಾಣೆಯ ನಿರೀಕ್ಷಕ ಜಯರಾಮ ಡಿ.ಗೌಡ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು. ಆರಂಭದಲ್ಲಿ 1ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ವಿಚಾರಣೆ ನಡೆಸಿ ದ್ದರು. ಆರೋಪಿಯು ಜೀವಾವಧಿ ಶಿಕ್ಷೆಯೊಂದಿಗೆ 2 ಲಕ್ಷ ರೂ. ದಂಡ ಪಾವತಿಸಲು ನ್ಯಾಯಾಲಯ ಆದೇಶಿಸಿದೆ. ಸರಕಾರಿ ಅಭಿಯೋಜಕರಾದ ಜುಡಿತ್ ಓಲ್ಗಾ ಮಾರ್ಗರೇಟ್ ವಾದಿಸಿದ್ದರು.

Share News