ಮಂಗಳೂರು: ನಗರದ ಹೊರವಲಯದ ತೊಕ್ಕೊಟ್ಟು ಫ್ಲೈಓವರ್ ಮೇಲ್ಭಾಗದಲ್ಲಿ ಇಂದು ಬೆಳಿಗ್ಗೆ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಿರುವ ಘಟನೆ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ಮುಳ್ಳುಗುಡ್ಡೆ ಹೌಸ್, ತಲಪಾಡಿ ನಿವಾಸಿ ಆರಿಫ್ ಯಾನೆ ‘ಟಾಬ್ಲೆಟ್ ಆರಿಫ್’ (46) ಎಂದು ಗುರುತಿಸಲಾಗಿದೆ. ಈತ ಓರ್ವ ರೌಡಿಶೀಟರ್ ಆಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಆರಿಫ್ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಢಿಕ್ಕಿ ಹೊಡೆದಿದ್ದಾರೆ. ಢಿಕ್ಕಿಯಿಂದ ರಸ್ತೆಗೆ ಬಿದ್ದ ತಕ್ಷಣವೇ, ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಲಾಗಿದೆ ಎನ್ನಲಾಗಿದೆ. ಕೃತ್ಯ ಎಸಗಿದ ಬಳಿಕ ದುಷ್ಕರ್ಮಿಗಳು ಕಾರಿನಲ್ಲಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಮಂಗಳೂರು ದಕ್ಷಿಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ.