ಮಂಗಳೂರು: ಪ್ರಸಿದ್ಧ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಾಗರಪಂಚಮಿ ಹಬ್ಬದ ಪ್ರಯುಕ್ತ ಸುಬ್ರಹ್ಮಣ್ಯ ದೇವರಿಗೆ ವಿಶೇಷ ಅಭಿಷೇಕ ಹಾಗೂ ವಿಶೇಷ ಪೂಜೆಗಳು ಅತ್ಯಂತ ಶ್ರದ್ಧಾ-ಭಕ್ತಿಗಳಿಂದ ನೆರವೇರಿದವು.

ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಕ್ಷೇತ್ರದ ಅಧ್ಯಕ್ಷರಾದ ಜೈರಾಜ್ ಎಚ್. ಸೋಮಸುಂದರಂ, ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ ಹಾಗೂ ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ದೇವೇಂದ್ರ ಪೂಜಾರಿ ಅವರು ಉಪಸ್ಥಿತರಿದ್ದರು.

ಉಪಾಧ್ಯಕ್ಷರಾದ ಡಾ. ಬಿ.ಜಿ. ಸುವರ್ಣ, ಸಮಿತಿ ಸದಸ್ಯರಾದ ಪಿ.ಕೆ. ಗೌರವಿ ರಾಜಶೇಖರ್ ಮತ್ತು ಶ್ರೀ ಗೋಕರ್ಣನಾಥ ಬ್ಯಾಂಕ್ ಅಧ್ಯಕ್ಷರಾದ ಚಂದ್ರಶೇಖರ್ ಸೇರಿದಂತೆ ಹಲವು ಗಣ್ಯರು ಹಾಗೂ ನೂರಾರು ಭಕ್ತಾದಿಗಳು ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು. ಪೂಜೆಯ ಬಳಿಕ ನೆರೆದಿದ್ದ ಸಹಸ್ರಾರು ಭಕ್ತ ಮಹಾಶಯರಿಗೆ ಅನ್ನಪ್ರಸಾದ ವಿನಿಯೋಗಿಸಲಾಯಿತು.
