• Home  
  • ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದಿರುವ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ  ನಡೆದ “ನೀರಜ್ ಚೋಪ್ರಾ ಕ್ಲಾಸಿಕ್- 2025” ಜಾವೆಲಿನ್ ಎಸೆತ ಕ್ರೀಡಾಕೂಟ
- HOME - STATE

ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದಿರುವ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ  ನಡೆದ “ನೀರಜ್ ಚೋಪ್ರಾ ಕ್ಲಾಸಿಕ್- 2025” ಜಾವೆಲಿನ್ ಎಸೆತ ಕ್ರೀಡಾಕೂಟ

ಬೆಂಗಳೂರು  ಜುಲೈ 06  ಭಾರತದ ಕ್ರೀಡಾ ಇತಿಹಾಸದಲ್ಲೇ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದಿರುವ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ “ನೀರಜ್ ಚೋಪ್ರಾ ಕ್ಲಾಸಿಕ್- 2025” ಜಾವೆಲಿನ್ ಎಸೆತ ಕ್ರೀಡಾಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋತ್ ಅವರ ಜೊತೆಯಾಗಿ ಪಾಲ್ಗೊಂಡು, ವಿಶ್ವಶ್ರೇಷ್ಠ ಜಾವೆಲಿನ್ ಎಸೆತಗಾರರ ಕ್ರೀಡಾ ಪ್ರದರ್ಶನವನ್ನು ವೀಕ್ಷಿಸಿ, ವಿಜೇತರಿಗೆ ಪದಕ ಪ್ರದಾನ ಮಾಡಿ ಗೌರವಿಸಿದರು. 


2 ಬಾರಿ ಒಲಿಂಪಿಕ್ ಪದಕ ವಿಜೇತ, ಹಾಲಿ ವಿಶ್ವಚಾಂಪಿಯನ್, ವಿಶ್ವನಂ. 1 ಜಾವಲಿನ್ ಪಟು ನೀರಜ್ ಚೋಪ್ರ ತಮ್ಮ ಹೆಸರಿನಲ್ಲಿ ಆರಂಭಿಸಿರುವ ಅಂತಾರಾಷ್ಟ್ರೀಯ ಜಾವಲಿನ್ ಕೂಟವು ಜಾವಲಿನ್ ಎಸೆತದಲ್ಲಿನ ದಿಗ್ಗಜರ ಕ್ರೀಡಾ ಸಾಮರ್ಥ್ಯ ಪ್ರದರ್ಶನದ ವೇದಿಕೆಯಾಗಿದ್ದು, ಮುಂದೆಯೂ ಇಂತಹ ಕ್ರೀಡಾಕೂಟದಲ್ಲಿ ರಾಜ್ಯದಲ್ಲಿ ಆಯೋಜನೆಗೊಂಡು ಯುವ ಜನರನ್ನು ಕ್ರೀಡೆಯತ್ತ ಆಕರ್ಷಿಸಲಿ ಎಂದು ಶುಭ ಕೋರಿದರು.


ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋತ್ ,  ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ.ಪರಮೇಶ್ವರ್ ವಿಜೇತರಿಗೆ ಪ್ರಶಸ್ತಿ ಮತ್ತು ಪದಕಗಳನ್ನು ನೀಡಿ ಗೌರವಿಸಿದರು.


ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು, ಶಾಸಕ ರಿಜ್ವಾನ್ ಅರ್ಷದ್ ಅವರು ಉಪಸ್ಥಿತರಿದ್ದರು.

Share News

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678