• Home  
  • ನವ ಮಂಗಳೂರು ಬಂದರು ಪ್ರಾಧಿಕಾರದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ಜಯಂತಿ ಆಚರಣೆ
- LATEST NEWS

ನವ ಮಂಗಳೂರು ಬಂದರು ಪ್ರಾಧಿಕಾರದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ಜಯಂತಿ ಆಚರಣೆ

ಮಂಗಳೂರು: ನವ ಮಂಗಳೂರು ಬಂದರು ಪ್ರಾಧಿಕಾರವು (ಎನ್‌ಎಂಪಿಎ) ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ಜಯಂತಿಯನ್ನು ಏಪ್ರಿಲ್ 14 ಭಕ್ತಿಪೂರ್ವಕವಾಗಿ ಆಚರಿಸಿತು.ಕಾರ್ಯಕ್ರಮದ ಆರಂಭದಲ್ಲಿ ಬಂದರು ಪ್ರದೇಶದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಂಗಳೂರು ಉತ್ತರ ಕ್ಷೇತ್ರದ ಮಾನ್ಯ ಶಾಸಕರಾದ ಡಾ. ಭರತ್ ಶೆಟ್ಟಿ, ಎನ್‌ಎಂಪಿಎ ಉಪಾಧ್ಯಕ್ಷರಾದ ಶ್ರೀಮತಿ ಎಸ್. ಶಾಂತಿ ಹಾಗೂ ಮುಖ್ಯ ಅತಿಥಿಗಳಾದ ಪ್ರೊ. ದಯಾನಂದ ನಾಯಕ್, ಮಾಜಿ […]

Share News

ಮಂಗಳೂರು: ನವ ಮಂಗಳೂರು ಬಂದರು ಪ್ರಾಧಿಕಾರವು (ಎನ್‌ಎಂಪಿಎ) ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ಜಯಂತಿಯನ್ನು ಏಪ್ರಿಲ್ 14 ಭಕ್ತಿಪೂರ್ವಕವಾಗಿ ಆಚರಿಸಿತು.ಕಾರ್ಯಕ್ರಮದ ಆರಂಭದಲ್ಲಿ ಬಂದರು ಪ್ರದೇಶದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಂಗಳೂರು ಉತ್ತರ ಕ್ಷೇತ್ರದ ಮಾನ್ಯ ಶಾಸಕರಾದ ಡಾ. ಭರತ್ ಶೆಟ್ಟಿ, ಎನ್‌ಎಂಪಿಎ ಉಪಾಧ್ಯಕ್ಷರಾದ ಶ್ರೀಮತಿ ಎಸ್. ಶಾಂತಿ ಹಾಗೂ ಮುಖ್ಯ ಅತಿಥಿಗಳಾದ ಪ್ರೊ. ದಯಾನಂದ ನಾಯಕ್, ಮಾಜಿ ಪ್ರಾಧ್ಯಾಪಕರು, ರಾಜಕೀಯ ವಿಜ್ಞಾನ ವಿಭಾಗ, ಮಂಗಳೂರು ವಿಶ್ವವಿದ್ಯಾಲಯ ಅವರು ಗೌರವ ನಮನ ಸಲ್ಲಿಸಿದರು. ಮಂಡಳಿ ಸದಸ್ಯರು, ಸಂಘಟನೆಗಳ ಪ್ರತಿನಿಧಿಗಳು, ಅಧಿಕಾರಿಗಳು, ನೌಕರರು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಬಳಿಕ ಎ.ಒ. ಕಟ್ಟಡದ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಉಪಾಧ್ಯಕ್ಷರಾದ ಶ್ರೀಮತಿ ಎಸ್. ಶಾಂತಿ ಹಾಗೂ ಪ್ರೊ. ದಯಾನಂದ ನಾಯಕ್ ಅವರು, “ಭಾರತೀಯ ಸಂವಿಧಾನದ ಶಿಲ್ಪಿಯಾಗಿ ಡಾ. ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ ಕೊಡುಗೆ ಅನನ್ಯ. ಸಮಾಜದಲ್ಲಿ ಸಮಾನತೆ, ನ್ಯಾಯ ಮತ್ತು ಸಬಲೀಕರಣಕ್ಕಾಗಿ ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆಯುವುದು ಇಂದಿನ ಅಗತ್ಯವಾಗಿದೆ,” ಎಂದು ಸ್ಮರಿಸಿದರು.

ಜನ್ಮ ಜಯಂತಿಯ ಅಂಗವಾಗಿ ಬಂದರು ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಇದು ಭವಿಷ್ಯದ ಪೀಳಿಗೆಯ ಅಭಿವೃದ್ಧಿ ಮತ್ತು ಪರಿಸರ ಸ್ಥಿರತೆಯ ಸಂಕೇತವಾಗಿ ಗಮನ ಸೆಳೆಯಿತು. ಸಮಾನತೆ ಮತ್ತು ರಾಷ್ಟ್ರ ನಿರ್ಮಾಣದ ಸಂಕಲ್ಪದೊಂದಿಗೆ ಕಾರ್ಯಕ್ರಮವು ಯಶಸ್ವಿಯಾಗಿ ಮುಕ್ತಾಯಗೊಂಡಿತು

Share News