• Home  
  • *ನವೆಂಬರ್ 7 ಮತ್ತು 8ರಂದು ನಿಟ್ಟೆ ವಿಶ್ವವಿದ್ಯಾನಿಲಯದ 15ನೇ ವಾರ್ಷಿಕ ಘಟಿಕೋತ್ಸವ *
- DAKSHINA KANNADA

*ನವೆಂಬರ್ 7 ಮತ್ತು 8ರಂದು ನಿಟ್ಟೆ ವಿಶ್ವವಿದ್ಯಾನಿಲಯದ 15ನೇ ವಾರ್ಷಿಕ ಘಟಿಕೋತ್ಸವ *

ಮಂಗಳೂರು. ನ 03: ನಿಟ್ಟೆ ವಿಶ್ವವಿದ್ಯಾನಿಲಯವು ತನ್ನ ಮಂಗಳೂರು ಹಾಗೂ ನಿಟ್ಟೆ ಕ್ಯಾಂಪಸ್‌ಗಳಲ್ಲಿ 15ನೇ ಘಟಿಕೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ಎರಡೂ ಕಾರ್ಯಕ್ರಮಗಳಲ್ಲಿ ಈ ವರ್ಷ ವಿವಿಧ ನಿಕಾಯಗಳಿಂದ ಒಟ್ಟಾರೆಯಾಗಿ 1.999 ಪದವೀಧದರು (1353 + 646) ಪದವಿ ಸ್ವೀಕರಿಸುತ್ತಿದ್ದಾರೆ.
ಮೊದಲ ಘಟಿಕೋತ್ಸವ ಕಾರ್ಯಕ್ರಮವು ನವೆಂಬರ್ 7 ರ ಶುಕ್ರವಾರ ಬೆಳಿಗ್ಗೆ 10:30 ರಂದು ಮಂಗಳೂರಿನ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ವೈದ್ಯಕೀಯ ಕಾಲೇಜಿನ (ಕ್ಷೇಮ), ನಿಟ್ಟೆ ಮೈದಾನದಲ್ಲಿ ನಡೆಯಲಿದೆ. ಎಂದು ಪ್ರೊ. ಡಾ. ಎಂ. ಎಸ್. ಮೂಡಿತ್ತಾಯ ಪತ್ರಿಗೋಷ್ಠಿಯಲ್ಲಿ ತಿಳಿಸಿದರು

ನಿಟ್ಟೆ ವಿಶ್ವವಿದ್ಯಾನಿಲಯದ ಮಾನ್ಯ ಕುಲಾಧಿಪತಿಗಳಾದ ಶ್ರೀ ಎನ್. ವಿನಯ ಹೆಗ್ಡೆ ಅವರು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಸಮುದಾಯ ಆರೋಗ್ಯ ಸಹಭಾಗಿತ್ವಕ್ಕಾಗಿ ಭಾರತೀಯ ಸಮುದಾಯ ಆರೋಗ್ಯ ಪ್ರತಿಷ್ಠಾನ (ಪಿಎಚ್‌ಎಫ್‌ಐ) ದ ಗುಡ್‌ವಿಲ್ ಅಂಬಾಸಿಡರ್ ಹಾಗೂ ಪ್ರತಿಷ್ಠಿತ ಗೌರವ ಪ್ರಾಧ್ಯಾಪಕ ಮತ್ತು ನವದೆಹಲಿಯ ಅಖಿಲ ಭಾರತ ವೈದ್ಯಕೀಯ ಸಂಸ್ಥೆ (ಎಐಐಎಂಎಸ್) ಯ ಹೃದಯವಿಜ್ಞಾನ ವಿಭಾಗದ ಮಾಜಿ ಮುಖ್ಯಸ್ಥ ಪ್ರೊ. ಡಾ. ಕೆ. ಶ್ರೀನಾಥ ರೆಡ್ಡಿ ಅವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ದಿವಂಗತ ಡಾ. ಮಧುಕರ ಶಾಂತಾರಾಮ ಕೇಕ್ರೆ ಅವರಿಗೆ ಮರಣೋತ್ತರವಾಗಿ ಗೌರವ ಡಾಕ್ಟರೇಟ್ ಪದವಿಯನ್ನು ನೀಡಲಾಗುತ್ತಿದೆ. ಈ ಪದವಿಯನ್ನು ಶ್ರೀಯುತರು ವೈದ್ಯಕೀಯ ಶಿಕ್ಷಣ, ಸಂಶೋಧನೆ ಹಾಗೂ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ ನೀಡಲಾಗುತ್ತಿದೆ.

‘ಎರಡನೇ ಘಟಿಕೋತ್ಸವ ಕಾರ್ಯಕ್ರಮವು ನವೆಂಬರ್ 8 ರ ಶನಿವಾರ ಬೆಳಿಗ್ಗೆ 10:30ಕ್ಕೆ ಕಾರ್ಕಳದ ನಿಟ್ಟೆಯ ಕ್ಯಾಂಪಸ್‌ನಲ್ಲಿ ನಡೆಯಲಿದೆ. ನಿಟ್ಟೆ ವಿಶ್ವವಿದ್ಯಾನಿಲಯದ ಮಾನ್ಯ ಕುಲಾಧಿಪತಿಗಳಾದ ಶ್ರೀ ಎನ್. ವಿನಯ ಹೆಗ್ಡೆ ಅವರು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಕೇರಳದ ಕೇಂದ್ರೀಯ ವಿಶ್ವವಿದ್ಯಾನಿಲಯದ ಕುಲಪತಿ ಹಾಗೂ ಪ್ರತಿಷ್ಠಿತ ಶಿಕ್ಷಣ ತಜ್ಞ ಮತ್ತು ಡೇಟಾ ಮೈನಿಂಗ್. ಜ್ಞಾನ ಆವಿಷ್ಕಾರ, ಬಿಗ್ ಡೇಟಾ ಅನಾಲಿಟಿಕ್ಸ್ ಕ್ಷೇತ್ರದಲ್ಲಿ ಪ್ರಖ್ಯಾತರಾದ ಎಂಜಿನಿಯರ್ ಪ್ರೊ. ಡಾ. ಸಿದ್ದು ಪಿ. ಅಲ್ಲೂರ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ.

ಈ ಎರಡೂ ಕಾರ್ಯಕ್ರಮಗಳಲ್ಲಿ ನಿಟ್ಟೆ ವಿಶ್ವವಿದ್ಯಾನಿಲಯದ ಮಾನ್ಯ ಸಮ ಕುಲಾಧಿಪತಿಗಳಾದ (ಆಸ್ಪತ್ರೆ ನಿರ್ವಹಣೆ) ಪ್ರೊ. ಡಾ. ಎಂ. ಶಾಂತಾರಾಮ ಶೆಟ್ಟಿ ಹಾಗೂ ಮಾನ್ಯ ಕುಲಾಧಿಪತಿಗಳಾದ (ಆಡಳಿತ) ಶ್ರೀ ವಿಶಾಲ್ ಹೆಗ್ಡೆ ಅವರು ಉಪಸ್ಥಿತರಿರಲಿದ್ದಾರೆ. ಮಾನ್ಯ ಕುಲಪತಿಗಳಾದ ಪ್ರೊ. ಡಾ. ಎಂ. ಎಸ್. ಮೂಡಿತ್ತಾಯ ಅವರು ಸ್ವಾಗತ ಭಾಷಣ ಮಾಡಲಿದ್ದಾರೆ. ವಿಶ್ವವಿದ್ಯಾನಿಲಯದ ಹಿರಿಯ ಅಧಿಕಾರಿಗಳಾದ, ಕುಲಸಚಿವರಾದ ಪ್ರೊ. ಡಾ. ಹರ್ಷ ಹಾಲಹಳ್ಳಿ. ಪರೀಕ್ಷಾ ನಿಯಂತ್ರಕ ಪ್ರೊ. ಡಾ. ಪ್ರಸಾದ್ ಬಿ. ಶೆಟ್ಟಿ, ನಿಟ್ಟೆ ಕ್ಯಾಂಪಸ್ ಪರೀಕ್ಷಾ ನಿಯಂತ್ರಕರಾದ ಡಾ. ಸುಬ್ರಮಣ್ಯ ಭಟ್, ವಿಶ್ವವಿದ್ಯಾನಿಲಯದ ವಿವಿಧ ಕಾಲೇಜುಗಳ ಮುಖ್ಯಸ್ಥರು, ಕಾರ್ಯನಿರ್ವಾಹಕ ಮತ್ತು ಶೈಕ್ಷಣಿಕ ಮಂಡಳಿ ಸದಸ್ಯರು ಭಾಗವಹಿಸಲಿದ್ದಾರೆ.

ಮಂಗಳೂರಿನ ಕ್ಯಾಂಪಸ್‌ನಲ್ಲಿ ನಡೆಯುವ ಘಟಿಕೋತ್ಸವದಲ್ಲಿ ವೈದ್ಯಕೀಯ, ದಂತ ವೈದ್ಯಕೀಯ, ಔಷಧ ವಿಜ್ಞಾನ, ನರ್ಸಿಂಗ್. ಫಿಸಿಯೋಥೆರಪಿ, ಅರೆ ವೈದ್ಯಕೀಯ ವಿಜ್ಞಾನ, ಮಾನವಿಕ, ಜೀವವಿಜ್ಞಾನ, ವಾಸ್ತುಶಿಲ್ಪ, ವಾಕ್ ಮತ್ತು ಶ್ರವಣ, ಆತಿಥ್ಯ ನಿರ್ವಹಣೆ ನಿಕಾಯಗಳ ಅಡಿಯಲ್ಲಿ ಪದವಿ ಪ್ರದಾನ ಮಾಡಲಾಗುವುದು. ನಿಟ್ಟೆಯಲ್ಲಿ ನಡೆಯುವ ಘಟಿಕೋತ್ಸವದಲ್ಲಿ ಕಂಪ್ಯೂಟರ್ ಅಪ್ಲಿಕೇಷನ್ಸ್, ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ, ವ್ಯವಹಾರ ಆಡಳಿತ. ವಾಣಿಜ್ಯ ಮತ್ತು ನಿರ್ವಹಣೆ ನಿಕಾಯಗಳ ಅಡಿಯಲ್ಲಿ ಪದವಿ ಪ್ರದಾನ ಮಾಡಲಾಗುವುದು. ಒಟ್ಟಾರೆಯಾಗಿ 31 ಡಾಕ್ಟೋರಲ್ ಪದವಿಗಳು. 907 ಸ್ನಾತಕೋತ್ತರ ಪದವಿಗಳು, 1054 ಸ್ನಾತಕ ಪದವಿಗಳು. 5 ಫೆಲೋಶಿಪ್‌ಗಳು ಮತ್ತು 2 ಸ್ನಾತಕೋತ್ತರ ಡಿಪ್ಲೊಮಾ ಪದವಿಗಳನ್ನು ಪ್ರದಾನ ಮಾಡಲಾಗುವುದು.

ಈ ಕಾರ್ಯಕ್ರಮಗಳು ನಿಟ್ಟೆ ವಿಶ್ವವಿದ್ಯಾನಿಲಯಕ್ಕೆ ಪ್ರಮುಖ ಮೈಲುಗಲ್ಲುಗಳಾಗಲಿವೆ. ವಿಶ್ವವಿದ್ಯಾನಿಲಯವು ಉನ್ನತ ಶಿಕ್ಷಣ. ಸಂಶೋಧನೆ ಹಾಗೂ ವೃತ್ತಿಪರ ಪ್ರಗತಿಯಲ್ಲಿ ಶ್ರೇಷ್ಠ ಸಾಧನೆಯನ್ನು ಮಾಡಲು ತನ್ನ ಬದ್ಧತೆಯನ್ನು ಸಾಬೀತುಪಡಿಸಲು ಹಾಗೂ ವಿದ್ಯಾರ್ಥಿಗಳ ಸಾಧನೆಯನ್ನು ಸಂತಸದಿಂದ ಆಚರಿಸಲು ಅನುವುಮಾಡಿಕೊಡಲಿವೆ.

ಪತ್ರಿಕಾಗೋಷ್ಠಿಯಲ್ಲಿ ಕುಲಸಚಿವರಾದ ಪ್ರೊ. ಡಾ. ಹರ್ಷ ಹಾಲಹಳ್ಳಿ. ಪರೀಕ್ಷಾ ನಿಯಂತ್ರಕ ಪ್ರೊ. ಡಾ. ಪ್ರಸಾದ್ ಬಿ. ಶೆಟ್ಟಿ, ನಿಟ್ಟೆ ಕ್ಯಾಂಪಸ್ ಪರೀಕ್ಷಾ ನಿಯಂತ್ರಕರಾದ ಡಾ. ಸುಬ್ರಮಣ್ಯ ಭಟ್, ಪಿ ಆರ್ ಓ ಹೇಮಂತ್ ಶೆಟ್ಟಿ ಉಪಸ್ಥಿತರಿದ್ದರು.

Share News

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678