LATEST NEWS

ಒಕ್ಕೆತ್ತೂರು ಸರಕಾರಿ ಶಾಲೆ: ಎನ್‌ಎಂಪಿಎ ಕೊಡುಗೆಯ ನೂತನ ಕೊಠಡಿಗಳನ್ನು ಉದ್ಘಾಟಿಸಿದ ಶಾಸಕ ಅಶೋಕ್ ಕುಮಾರ್ ರೈ

ವಿಟ್ಲ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಒಕ್ಕೆತ್ತೂರು ಇಲ್ಲಿ ಎನ್‌ಎಂಪಿಎ (NMPA) ಸಂಸ್ಥೆಯ ವತಿಯಿಂದ ಕೊಡುಗೆಯಾಗಿ ನೀಡಲಾದ ಎರಡು ನೂತನ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮವು ಇತ್ತೀಚೆಗೆ ಅತ್ಯಂತ ಯಶಸ್ವಿಯಾಗಿ ನೆರವೇರಿತು.

ನೂತನ ಕೊಠಡಿಗಳನ್ನು ಉದ್ಘಾಟಿಸಿ, ಶಾಲೆಗೆ ಶುಭ ಹಾರೈಸಿದ ಪುತ್ತೂರಿನ ಮಾನ್ಯ ಶಾಸಕರಾದ ಅಶೋಕ್ ಕುಮಾರ್ ರೈ ಅವರು ಮಾತನಾಡಿ, ಗ್ರಾಮೀಣ ಭಾಗದ ಸರಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಇಂತಹ ದಾನಿ ಸಂಸ್ಥೆಗಳ ಪಾತ್ರ ಮಹತ್ತರವಾದುದು ಎಂದು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹಾಗೂ ಪ್ರಮುಖರಾಗಿ ಭಾಗವಹಿಸಿದ್ದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ. ಎಸ್. ಮೊಹಮ್ಮದ್, ವಿಟ್ಲದ ನ್ಯಾಯವಾದಿ ಪದ್ಮನಾಭ ಪೂಜಾರಿ, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಮಾಲತಿ, ವಿಟ್ಲ ಪಟ್ಟಣ ಪಂಚಾಯತ್ ಸದಸ್ಯರಾದ ಡೀಕಯ್ಯ ಹಾಗೂ ಶಾಲಾ ಎಸ್‌ಡಿಎಂಸಿ (SDMC) ಅಧ್ಯಕ್ಷರಾದ ಮಹಮ್ಮದ್ ಹ್ಯಾರೀಸ್ ಸಿ.ಎಚ್. ವೇದಿಕೆಯಲ್ಲಿ ಉಪಸ್ಥಿತರಿದ್ದು, ಶಾಲೆಯ ಅಭಿವೃದ್ಧಿಗೆ ಬೆಂಬಲ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಆರಂಭದಲ್ಲಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕರಾದ ಜಯಪ್ರಕಾಶ್ ಅವರು ಎಲ್ಲರನ್ನೂ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಾಲಾ ಶಿಕ್ಷಕಿ ಶೋಭಾವತಿ ಅವರು ಧನ್ಯವಾದ ಸಮರ್ಪಿಸಿದರು. ಶಿಕ್ಷಕ ಅಹ್ಮದ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

ಶಾಲಾ ಶಿಕ್ಷಕಿಯರಾದ ಯಶಸ್ವಿನಿ, ಪವಿತ್ರ, ಪ್ರಿಯಲತ, ಮಿಸ್ರಿಯಾ, ಪ್ರೀತ ಹಾಗೂ ಧನುಶ್ರೀ ಅವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಸಭೆಯಲ್ಲಿ ಊರಿನ ಪ್ರಮುಖರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Share News