LATEST NEWS

ಹಿರಿಯ ಪತ್ರಕರ್ತ ಪಿ.ಬಿ. ಹರೀಶ್ ರೈ ಅವರಿಗೆ ಸಹಕಾರಿ ಸಪ್ತಾಹದ ಪ್ರತಿಷ್ಠಿತ ಪತ್ರಿಕೋದ್ಯಮ ಪ್ರಶಸ್ತಿ

ಮಂಗಳೂರು: ಸಹಕಾರಿ ಸಪ್ತಾಹದ ಪ್ರಯುಕ್ತ ಪತ್ರಿಕಾ ರಂಗದ ಸಾಧಕರಿಗೆ ನೀಡಲಾಗುವ ಪ್ರತಿಷ್ಠಿತ ಪ್ರಶಸ್ತಿಯು ಈ ಬಾರಿ ಹಿರಿಯ ಪತ್ರಕರ್ತ, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾದ ಪಿ.ಬಿ. ಹರೀಶ್ ರೈ ಅವರಿಗೆ ಲಭಿಸಿದೆ.

ಪತ್ರಿಕೋದ್ಯಮ ಕ್ಷೇತ್ರಕ್ಕೆ ನೀಡಿರುವ ಸುದೀರ್ಘ ಹಾಗೂ ಪ್ರಾಮಾಣಿಕ ಸೇವೆಯನ್ನು ಪರಿಗಣಿಸಿ, ಸಹಕಾರಿ ಸಪ್ತಾಹದ ಸಂದರ್ಭದಲ್ಲಿ ಪತ್ರಿಕಾ ರಂಗದ ಸಾಧಕರಿಗೆ ನೀಡಲಾಗುವ ಪ್ರತಿಷ್ಠಿತ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತ ಪಿ.ಬಿ. ಹರೀಶ್ ರೈ ಅವರಿಗೆ ನೀಡಿ ಗೌರವಿಸಲಾಗಿದೆ.

ಹಲವು ದಶಕಗಳಿಂದ ಪತ್ರಿಕಾ ರಂಗದಲ್ಲಿ ಸಕ್ರಿಯರಾಗಿರುವ ಪಿ.ಬಿ. ಹರೀಶ್ ರೈ ಅವರು ತಮ್ಮ ವೃತ್ತಿಪರತೆ, ನಿಖರ ವರದಿಗಾರಿಕೆ ಮತ್ತು ಸಾಮಾಜಿಕ ಕಳಕಳಿಯ ಬರಹಗಳ ಮೂಲಕ ಜನಮನ್ನಣೆ ಗಳಿಸಿದ್ದಾರೆ. ಪ್ರಸ್ತುತ ಮಂಗಳೂರು ಪ್ರೆಸ್‌ಕ್ಲಬ್‌ನ ಅಧ್ಯಕ್ಷರಾಗಿ ಸಮರ್ಥವಾಗಿ ಕಾರ್ಯನಿರ್ವ ಹಿಸುತ್ತಿರುವ ಇವರು, ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿ ಪತ್ರಕರ್ತರ ಏಳಿಗೆಗೆ ಶ್ರಮಿಸಿದ್ದಾರೆ.

ಸಹಕಾರಿ ಕ್ಷೇತ್ರ ಮತ್ತು ಪತ್ರಿಕೋದ್ಯಮದ ನಡುವಿನ ಕೊಂಡಿಯಾಗಿ ಕೆಲಸ ಮಾಡಿರುವ ಇವರ ಸಾಧನೆಯನ್ನು ಗುರುತಿಸಿ ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅರ್ಹ ಸಾಧಕರಿಗೆ ಈ ಗೌರವ ಒಲಿದುಬಂದಿರುವುದಕ್ಕೆ ಪತ್ರಿಕಾ ಬಳಗ, ಸಹಕಾರಿ ಸಂಘಗಳ ಪ್ರಮುಖರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

Share News