DAKSHINA KANNADAHOMELATEST NEWS

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ನೂತನ ಅಧ್ಯಕ್ಷರಾಗಿ ಪದ್ಮರಾಜ್‌ ಆರ್‌. ಪೂಜಾರಿ ನೇಮಕ

ನವದೆಹಲಿ:ರಾಜ್ಯ ಕಾಂಗ್ರೆಸ್‌ನಲ್ಲಿ ಸಾಂಸ್ಥಿಕ ಪುನರ್ರಚನೆಯ ಮಹತ್ವದ ಬೆಳವಣಿಗೆಯೊಂದರಲ್ಲಿ, ಕರ್ನಾಟಕದ ಎಲ್ಲಾ ಜಿಲ್ಲಾ ಕಾಂಗ್ರೆಸ್ ಸಮಿತಿಗಳ (DCC) ನೂತನ ಅಧ್ಯಕ್ಷರ ನೇಮಕಾತಿ ಪ್ರಸ್ತಾವನೆಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಅಧಿಕೃತ ಅಧಿಕೃತ ಪಟ್ಟಿ ಪ್ರಕಟಿಸಿದೆ.

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಒಪ್ಪಿಗೆಯ ಮೇರೆಗೆ, ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಅವರು ಈ ಆದೇಶವನ್ನು ಹೊರಡಿಸಿದ್ದು, ಇದು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಕಳೆದ ಬಾರಿಯ ಲೋಕಸಭಾ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹಿರಿಯ ಬಿಲ್ಲವ ಮುಖಂಡ ಪದ್ಮರಾಜ್‌ ಆರ್. ಪೂಜಾರಿ ಅವರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಜನರಲ್ ಸೆಕ್ರೆಟರಿ ಕೆ. ಸಿ. ವೇಣುಗೋಪಾಲ್‌ ಅವರು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವ ಮತ್ತು ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಎದುರಿಸುವ ನಿಟ್ಟಿನಲ್ಲಿ ಹೈಕಮಾಂಡ್ ಈ ಮಹತ್ವದ ಜವಾಬ್ದಾರಿಯನ್ನು ಪದ್ಮರಾಜ್ ಅವರಿಗೆ ವಹಿಸಿದೆ.

Share News