• Home  
  • ಪಾದುವಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್‌ಮೆಂಟ್‌ನಲ್ಲಿ ಸಂಭ್ರಮದ ವಾರ್ಷಿಕೋತ್ಸವ ಆಚರಣೆ
- LATEST NEWS

ಪಾದುವಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್‌ಮೆಂಟ್‌ನಲ್ಲಿ ಸಂಭ್ರಮದ ವಾರ್ಷಿಕೋತ್ಸವ ಆಚರಣೆ

ಮಂಗಳೂರು : ನಗರದ ಪಾದುವಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್‌ ಮೆಂಟ್‌ನ ವಾರ್ಷಿಕೋತ್ಸವವು ಎಪ್ರಿಲ್ 17ರಂದು ಕಾಲೇಜು ಆವರಣದಲ್ಲಿ ಅತ್ಯಂತ ಸಡಗರದಿಂದ ಜರುಗಿತು. ಪಾದುವಾ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂದನೀಯ ಗುರುಗಳಾದ ವಾಲ್ಟರ್ ಡಿಸೋಜ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಮಂಗಳೂರು ಸ್ಮಾರ್ಟ್ ಸಿಟಿಯ ಪ್ರಧಾನ ವ್ಯವಸ್ಥಾಪಕ ಶ್ರೀ ಅರುಣ್ ಪ್ರಭ ಕೆ.ಎಸ್. ಮಾತನಾಡಿ, “ನಾನು ಪಾದುವಾ ಶಾಲೆಯ ಹಳೆಯ ವಿದ್ಯಾರ್ಥಿಯಾಗಿದ್ದು, ಇಲ್ಲಿ ಪಡೆದ ಜ್ಞಾನ ಮತ್ತು ಶಿಸ್ತು ನನ್ನ […]

Share News

ಮಂಗಳೂರು : ನಗರದ ಪಾದುವಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್‌ ಮೆಂಟ್‌ನ ವಾರ್ಷಿಕೋತ್ಸವವು ಎಪ್ರಿಲ್ 17ರಂದು ಕಾಲೇಜು ಆವರಣದಲ್ಲಿ ಅತ್ಯಂತ ಸಡಗರದಿಂದ ಜರುಗಿತು.

ಪಾದುವಾ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂದನೀಯ ಗುರುಗಳಾದ ವಾಲ್ಟರ್ ಡಿಸೋಜ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಮಂಗಳೂರು ಸ್ಮಾರ್ಟ್ ಸಿಟಿಯ ಪ್ರಧಾನ ವ್ಯವಸ್ಥಾಪಕ ಶ್ರೀ ಅರುಣ್ ಪ್ರಭ ಕೆ.ಎಸ್. ಮಾತನಾಡಿ, “ನಾನು ಪಾದುವಾ ಶಾಲೆಯ ಹಳೆಯ ವಿದ್ಯಾರ್ಥಿಯಾಗಿದ್ದು, ಇಲ್ಲಿ ಪಡೆದ ಜ್ಞಾನ ಮತ್ತು ಶಿಸ್ತು ನನ್ನ ವ್ಯಕ್ತಿತ್ವದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ” ಎಂದು ತಮ್ಮ ಶಾಲಾ ದಿನಗಳನ್ನು ಸ್ಮರಿಸಿದರು.

ಮತ್ತೊಬ್ಬ ಮುಖ್ಯ ಅತಿಥಿ ಸ್ಪರ್ಶ ಸೇವಾ ಟ್ರಸ್ಟ್‌ನ ಅಧ್ಯಕ್ಷ ಶ್ರೀ ಡೆನಿಸ್ ಡಿಸಿಲ್ವ ಅವರು ಮಾತನಾಡಿ, ಪಾದುವಾ ಶಿಕ್ಷಣ ಸಂಸ್ಥೆಯು ಸಮಾಜದ ಎಲ್ಲಾ ವರ್ಗದ ಜನರಿಗೆ ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಪರಿ ಅಮೋಘ ಎಂದು ಶ್ಲಾಘಿಸಿದರು.


ಬೆಂದೂರು ಚರ್ಚಿನ ಉಪಾಧ್ಯಕ್ಷ ಶ್ರೀ ದೀಪಕ್ ರಂಜನ್ ಡಿಸೋಜ, ಕಾರ್ಯದರ್ಶಿ ಶ್ರೀ ರಾಯ್‌ಸ್ಟನ್ ಜೆ.ಎಮ್. ಫರಿಯಾಸ್ ಮತ್ತು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀ ಲವಿತ್‌ರಾಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಹಳೆ ವಿದ್ಯಾರ್ಥಿಯಾಗಿದ್ದ ಶ್ರೀ ಅರುಣ್ ಪ್ರಭ ಕೆ.ಎಸ್. ಅವರನ್ನು ಸನ್ಮಾನಿಸಲಾಯಿತು. ಪಠ್ಯ, ಪತ್ಯೇತರ ಚಟುವಟಿಕೆ ಹಾಗೂ ಕ್ರೀಡೆಯಲ್ಲಿ ಅತ್ಯುನ್ನತ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪಾದುವಾ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂದನೀಯ ಗುರುಗಳು ವಾಲ್ಟರ್ ಡಿಸೋಜ ಅವರು ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿ ವಿದ್ಯಾರ್ಥಿಗಳನ್ನು, ಪ್ರಾಧ್ಯಾಪಕರನ್ನು ಉದ್ದೇಶಿಸಿ ಉತ್ತೇಜನಪೂರ್ಣ ಮಾತುಗಳನ್ನಾಡಿದರು

.ಪಾದುವಾ ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ರೋಶನ್ ವಿನ್ನಿ ಸಾಂತುಮಯೋರ್, ಐಕ್ಯುಎಸಿ ಸಂಯೋಜಕರಾದ ಪ್ರಾಧ್ಯಾಪಕಿ ಸೀಮಾ ಪಿರೇರಾ, ಕಾರ್ಯಕ್ರಮ ಸಂಯೋಜಕಿಯಾದ ಪ್ರಾಧ್ಯಾಪಕಿ ರೇಷ್ಮಾ ರೇಶಲ್, ವಿದ್ಯಾರ್ಥಿ ಪರಿಷತ್ ಅಧ್ಯಕ್ಷರಾದ ಶ್ರೀ ಕೀತ್ ರೆಬೆಲ್ಲೊ, ಕಾರ್ಯದರ್ಶಿ ಶ್ರೀ ಕ್ರೈಡ್ ಪತ್ರಾವೊ ಹಾಗೂ ಸಾಂಸ್ಕೃತಿಕ ಕಾರ್ಯದರ್ಶಿ ಶ್ರೀ ಪ್ರಣಾಮ್ ಯಾದವ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವು ಜರುಗಿತು.

Share News