ಮಂಗಳೂರು: ಪ್ರಕೃತಿಯ ಸಿರಿಯ ಮಧ್ಯೆ ನೆಲೆಸಿರುವ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಇದೇ ಮಾರ್ಚ್ 30ರಿಂದ ಏಪ್ರಿಲ್ 6ರವರೆಗೆ ಅತ್ಯಂತ ವೈಭವದಿಂದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ನಡೆಯಲಿವೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಹಾಗೂ ಹೈಕೋರ್ಟ್ ಹಿರಿಯ ನ್ಯಾಯವಾದಿ ಡಾ. ಅರುಣ ಶ್ಯಾಮ್ ಅವರು ತಿಳಿಸಿದ್ದಾರೆ.

ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ವಿವರಗಳ ನ್ನು ಹಂಚಿಕೊಂಡರು:
- ಪುಣ್ಯ ತೀರ್ಥಗಳ ಮೆರವಣಿಗೆ: ಮಾರ್ಚ್ 30ರಂದು ಏಕಾದಶ ನದಿಗಳ ಪುಣ್ಯ ತೀರ್ಥಗಳ ಭವ್ಯ ಮೆರವಣಿಗೆಯೊಂದಿಗೆ ಉತ್ಸವಕ್ಕೆ ಚಾಲನೆ ದೊರೆಯಲಿದೆ.
- ಗಣ್ಯರ ಆಗಮನ: ಸಮಾರಂಭದಲ್ಲಿ ನಾಡಿನ ಪ್ರಮುಖ ಸಂತರು, ಕೇಂದ್ರ ಸಚಿವರು, ರಾಜ್ಯದ ಉಪಮುಖ್ಯಮಂತ್ರಿಗಳು ಸೇರಿದಂತೆ ಅನೇಕ ರಾಜಕೀಯ ಹಾಗೂ ಧಾರ್ಮಿಕ ಗಣ್ಯರು ಭಾಗವಹಿಸಲಿದ್ದಾರೆ.
- ಸಮಾರೋಪ: ಏಪ್ರಿಲ್ 6ರವರೆಗೆ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಏಪ್ರಿಲ್ 7ರಂದು ಕಾರ್ಯಕರ್ತರ ವಿಶೇಷ ಸಭೆ ಆಯೋಜಿಸಲಾಗಿದೆ.

ಆಡಳಿತ ಮೊಕ್ತೇಸರರಾದ ಸೇರಾಜೆ ಸತ್ಯನಾರಾಯಣ ಭಟ್, ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ಸೇರಾಜೆ ಗೋಪಾಲಕೃಷ್ಣ ಭಟ್, ಸಂಘಟನಾ ಕಾರ್ಯದರ್ಶಿ ಶಿವಪ್ರಸಾದ್ ಶೆಟ್ಟಿ ಅನೆಯಾಲಗುತ್ತು, ಕಾರ್ಯದರ್ಶಿ ಕೃಷ್ಣ ಎಂ.ಆರ್. ಕಡಬ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಅರವಿಂದ ಪದ್ಯಾಣ, ಕಾರ್ಯದರ್ಶಿ ಈಶಾನ್ಯ ಪದ್ಯಾಣ, ಸಾಂಸ್ಕೃತಿಕ ಸಮಿತಿ ಸಂಚಾಲಕಿ ಪ್ರಣತಿ ಚೈತನ್ಯ ಪದ್ಯಾಣ ಹಾಗೂ ಸಮಿತಿಯ ಪ್ರಮುಖರಾದ ವಿನೋದ್ ಶೆಟ್ಟಿ ಪಟ್ಲ ಮತ್ತು ಚೈತನ್ಯ ಪದ್ಯಾಣ ಉಪಸ್ಥಿತರಿದ್ದರು.

