• Home  
  • ಪಾಕ್‌ ಗಡಿ ಬಂದ್‌; ಪಾಕಿಸ್ತಾನಿಯರಿಗೆ ಭಾರತ ಪ್ರವೇಶ ನಿಷೇಧ ಸೇರಿ ಐದು ಮಹತ್ವದ ನಿರ್ಧಾರ
- DAKSHINA KANNADA - HOME - LATEST NEWS

ಪಾಕ್‌ ಗಡಿ ಬಂದ್‌; ಪಾಕಿಸ್ತಾನಿಯರಿಗೆ ಭಾರತ ಪ್ರವೇಶ ನಿಷೇಧ ಸೇರಿ ಐದು ಮಹತ್ವದ ನಿರ್ಧಾರ

ನವದೆಹಲಿ: ಪೆಹಲ್ಗಾಮ್‌ ಉಗ್ರರ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನ ವಿರುದ್ಧ ಮಹತ್ವದ ನಿರ್ಧಾರ ಕೈಗೊಂಡಿದೆ. ಇಂದು ನಡೆದ ಸಭೆಯಲ್ಲಿ ಭಾರತ ಗಡಿಯಾಚೆಗಿನ ಭಯೋತ್ಪಾದನೆ ಕೊನೆಗೊಳಿಸಲು ಮತ್ತು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಉತ್ತರವಾಗಿ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ಇಂದು ಭದ್ರತೆ ಕುರಿತ ಸಂಪುಟ ಸಮಿತಿ (ಸಿಸಿಎಸ್) ಸಭೆ ನಡೆದಿದೆ. ಈ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಇತರ […]

Share News

ನವದೆಹಲಿ: ಪೆಹಲ್ಗಾಮ್‌ ಉಗ್ರರ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನ ವಿರುದ್ಧ ಮಹತ್ವದ ನಿರ್ಧಾರ ಕೈಗೊಂಡಿದೆ. ಇಂದು ನಡೆದ ಸಭೆಯಲ್ಲಿ ಭಾರತ ಗಡಿಯಾಚೆಗಿನ ಭಯೋತ್ಪಾದನೆ ಕೊನೆಗೊಳಿಸಲು ಮತ್ತು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಉತ್ತರವಾಗಿ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ಇಂದು ಭದ್ರತೆ ಕುರಿತ ಸಂಪುಟ ಸಮಿತಿ (ಸಿಸಿಎಸ್) ಸಭೆ ನಡೆದಿದೆ. ಈ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಇತರ ಹಿರಿಯ ಸಚಿವರು ಭಾಗವಹಿಸಿದ್ದಾರೆ. ಉಗ್ರರಿಗೆ ಕುಮ್ಮಕ್ಕು ನೀಡುವ ಮೂಲಕ ಕಾಶ್ಮೀರ ಕಣಿವೆಯಲ್ಲಿ 26 ಜನರನ್ನು ಬಲಿ ಪಡೆಯಲು ಬೆಂಬಲ ನೀಡಿದ ಪಾಕಿಸ್ತಾನಕ್ಕೆ ಭಾರತ ತಕ್ಕ ತಿರುಗೇಟು ನೀಡಿದೆ.

ಸಭೆಯಲ್ಲಿ ಮೋದಿ ಸರ್ಕಾರ ತೆಗೆದುಕೊಂಡ ನಿರ್ಧಾರಗಳು:

  • ಸಿಂಧೂ ಜಲ ಒಪ್ಪಂದ ಸ್ಥಗಿತ
  • ಅಟ್ಟಾರಿ-ವಾಘಾ ಗಡಿ ತಕ್ಷಣದಿಂದಲೇ ಬಂದ್‌
  • ಭಾರತಕ್ಕೆ ಪಾಕಿಸ್ತಾನಿ ಪ್ರಜೆಗಳಿಗೆ ಪ್ರವೇಶವಿಲ್ಲ, ಪಾಕಿಸ್ತಾನೀಯರಿಗೆ ವೀಸಾ ನೀಡುವುದಿಲ್ಲ.
  • ಈಗಾಗಲೇ ಭಾರತಕ್ಕೆ ಬಂದಿರುವ ಯಾವುದೇ ಪಾಕಿಸ್ತಾನಿ ಪ್ರಜೆಗೆ ಭಾರತವನ್ನು ತೊರೆಯಲು 48 ಗಂಟೆಗಳ ಕಾಲಾವಕಾಶವಿದೆ.
  • ನವದೆಹಲಿಯಲ್ಲಿರುವ ಪಾಕಿಸ್ತಾನಿ ಹೈಕಮಿಷನ್‌ನಲ್ಲಿರುವ ರಕ್ಷಣಾ, ಮಿಲಿಟರಿ, ನೌಕಾ ಮತ್ತು ವಾಯು ಸಲಹೆಗಾರರನ್ನು ಅವರು ಭಾರತವನ್ನು ಬಿಡಲು ಒಂದು ವಾರ ಸಮಯ ನೀಡಲಾಗಿದೆ.

ಭಾರತವು ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್‌ನ ರಕ್ಷಣಾ, ನೌಕಾಪಡೆ ಮತ್ತು ವಾಯು ಸಲಹೆಗಾರರನ್ನು ವಾಪಾಸ್ ಕರೆಸಿಕೊಳ್ಳಲಿದೆ.

 

Share News