• Home  
  • ಹಿರಿಯ ಪತ್ರಕರ್ತ ಪರಮಾನಂದ ಸಾಲ್ಯಾನ್‌ಗೆ ಭಾವಪೂರ್ಣ ನುಡಿನಮನ
- LATEST NEWS

ಹಿರಿಯ ಪತ್ರಕರ್ತ ಪರಮಾನಂದ ಸಾಲ್ಯಾನ್‌ಗೆ ಭಾವಪೂರ್ಣ ನುಡಿನಮನ

ಮಂಗಳೂರು: ಇತ್ತೀಚೆಗೆ ನಿಧನರಾದ ಹಿರಿಯ ಪತ್ರಕರ್ತ ಹಾಗೂ ರಂಗಕರ್ಮಿ ಪರಮಾನಂದ ಸಾಲ್ಯಾನ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಜಂಟಿಯಾಗಿ ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಭಾವಪೂರ್ಣ ಶ್ರದ್ಧಾಂಜಲಿ ಮತ್ತು ನುಡಿನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಮಾತನಾಡಿ, “ಸಾಲ್ಯಾನ್ ಅವರು ಪತ್ರಿಕೋದ್ಯಮದ ಜೊತೆಗೆ ತುಳು ರಂಗಭೂಮಿ ಮತ್ತು ಜಾನಪದ ಕ್ಷೇತ್ರದಲ್ಲಿ ಅಗಾಧ ಜ್ಞಾನ ಹೊಂದಿದ್ದರು. ಭೂತಾರಾಧನೆ, ನಾಟಕ ಹಾಗೂ […]

Share News

ಮಂಗಳೂರು: ಇತ್ತೀಚೆಗೆ ನಿಧನರಾದ ಹಿರಿಯ ಪತ್ರಕರ್ತ ಹಾಗೂ ರಂಗಕರ್ಮಿ ಪರಮಾನಂದ ಸಾಲ್ಯಾನ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಜಂಟಿಯಾಗಿ ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಭಾವಪೂರ್ಣ ಶ್ರದ್ಧಾಂಜಲಿ ಮತ್ತು ನುಡಿನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಮಾತನಾಡಿ, “ಸಾಲ್ಯಾನ್ ಅವರು ಪತ್ರಿಕೋದ್ಯಮದ ಜೊತೆಗೆ ತುಳು ರಂಗಭೂಮಿ ಮತ್ತು ಜಾನಪದ ಕ್ಷೇತ್ರದಲ್ಲಿ ಅಗಾಧ ಜ್ಞಾನ ಹೊಂದಿದ್ದರು. ಭೂತಾರಾಧನೆ, ನಾಟಕ ಹಾಗೂ ತುಳುನಾಡಿನ ಸಮೃದ್ಧ ಸಂಸ್ಕೃತಿಯ ಬಗ್ಗೆ ಅವರಿಗಿದ್ದ ವಿಶೇಷ ಆಸಕ್ತಿ ಅನನ್ಯವಾಗಿತ್ತು” ಎಂದು ಅವರ ಕೊಡುಗೆಯನ್ನು ಸ್ಮರಿಸಿದರು.

ಮತ್ತೊಬ್ಬ ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಮಾತನಾಡಿ, “ಬಹುಮುಖ ಪ್ರತಿಭೆಯ ಸಾಲ್ಯಾನ್ ಅವರು ಎಲ್ಲರೊಂದಿಗೂ ಅತ್ಯಂತ ಸ್ನೇಹದಿಂದ ಬೆರೆಯುತ್ತಿದ್ದರು. ಅವರಲ್ಲಿದ್ದ ಅಪಾರ ತುಳು ಪಾಂಡಿತ್ಯ ಮತ್ತು ಭಾಷಾ ಶುದ್ಧತೆ ಇಂದಿನ ಯುವ ಪೀಳಿಗೆಗೆ ಸದಾ ಮಾರ್ಗದರ್ಶಿಯಾಗಿದೆ” ಎಂದರು.

ಇದೇ ಸಂದರ್ಭದಲ್ಲಿ ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ಮಾಜಿ ಅಧ್ಯಕ್ಷ ಜಗನ್ನಾಥ್ ಶೆಟ್ಟಿ ಬಾಳ, ಹಿರಿಯ ಪತ್ರಕರ್ತರಾದ ಭಾಸ್ಕರ ರೈ ಕಟ್ಟಿ ಹಾಗೂ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ ಅವರು ಮೃತ ಸಾಲ್ಯಾನ್ ಅವರಿಗೆ ನುಡಿನಮನ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷರಗಳಾದ ವಿಲ್ಫ್ರೆಡ್ ಡಿಸೋಜ, ರಾಜೇಶ್ ಶೆಟ್ಟಿ ಹಾಗೂ ಸದಸ್ಯ ರಾಜೇಶ್ ದಡ್ಡಂಗಡಿ ಸೇರಿದಂತೆ ಹಲವು ಪತ್ರಕರ್ತರು ಉಪಸ್ಥಿತರಿದ್ದು, ಮೃತರ ಆತ್ಮಕ್ಕೆ ಶಾಂತಿ ಕೋರಿದರು.

Share News