• Home  
  • Breaking: ಪೆಟ್ರೋಲ್ – ಡೀಸೆಲ್ ಬೆಲೆ ದರ ಪ್ರತಿ ಲೀಟರ್​ಗೆ 3 ರೂ. ಏರಿಕೆ
- DAKSHINA KANNADA - HOME - LATEST NEWS - NATIONAL

Breaking: ಪೆಟ್ರೋಲ್ – ಡೀಸೆಲ್ ಬೆಲೆ ದರ ಪ್ರತಿ ಲೀಟರ್​ಗೆ 3 ರೂ. ಏರಿಕೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂಧನ ಮಿತ ಬಳಕೆ ಹಾಗೂ ಚಿನ್ನ ಖರೀದಿ ನಿಲ್ಲಿಸುವಂತೆ ಜನರಲ್ಲಿ ಮನವಿ ಮಾಡಿದ ಬೆನ್ನಲ್ಲೇ ದೇಶಾದ್ಯಂತ ಪೆಟ್ರೋಲ್ ಹಾಗೂ ಡೀಸೆಲ್ ದರ ಪ್ರತಿ ಲೀಟರ್​ಗೆ 3 ರೂ. ಏರಿಕೆಯಾಗಿದೆ. ಇಂಧನ ದರ ಏರಿಕೆ ಬಗ್ಗೆ ತೈಲ ಕಂಪನಿಗಳು ಶುಕ್ರವಾರ ಬೆಳಗ್ಗೆ ಘೋಷಣೆ ಮಾಡಿದ್ದು, ತಕ್ಷಣದಿಂದಲೇ ಜಾರಿಗೆ ಬರಲಿದೆ. ರಾಜ್ಯದಲ್ಲಿ ಪೆಟ್ರೋಲ್ ದರ ಲೀಟರ್​​ಗೆ 3.27 ರೂಪಾಯಿ ಏರಿಕೆಯಾಗಿದ್ದು, ಡಿಸೇಲ್ ಬೆಲೆ ಲೀಟರ್​​ಗೆ 3.12 ರೂಪಾಯಿ ಏರಿಕೆಯಾಗಿದೆ. ಈ ಹಿಂದೆ ಪೆಟ್ರೋಲ್ ಬೆಲೆ 102.90 […]

Share News

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂಧನ ಮಿತ ಬಳಕೆ ಹಾಗೂ ಚಿನ್ನ ಖರೀದಿ ನಿಲ್ಲಿಸುವಂತೆ ಜನರಲ್ಲಿ ಮನವಿ ಮಾಡಿದ ಬೆನ್ನಲ್ಲೇ ದೇಶಾದ್ಯಂತ ಪೆಟ್ರೋಲ್ ಹಾಗೂ ಡೀಸೆಲ್ ದರ ಪ್ರತಿ ಲೀಟರ್​ಗೆ 3 ರೂ. ಏರಿಕೆಯಾಗಿದೆ. ಇಂಧನ ದರ ಏರಿಕೆ ಬಗ್ಗೆ ತೈಲ ಕಂಪನಿಗಳು ಶುಕ್ರವಾರ ಬೆಳಗ್ಗೆ ಘೋಷಣೆ ಮಾಡಿದ್ದು, ತಕ್ಷಣದಿಂದಲೇ ಜಾರಿಗೆ ಬರಲಿದೆ.

ರಾಜ್ಯದಲ್ಲಿ ಪೆಟ್ರೋಲ್ ದರ ಲೀಟರ್​​ಗೆ 3.27 ರೂಪಾಯಿ ಏರಿಕೆಯಾಗಿದ್ದು, ಡಿಸೇಲ್ ಬೆಲೆ ಲೀಟರ್​​ಗೆ 3.12 ರೂಪಾಯಿ ಏರಿಕೆಯಾಗಿದೆ. ಈ ಹಿಂದೆ ಪೆಟ್ರೋಲ್ ಬೆಲೆ 102.90 ರೂ. ಇತ್ತು. ಈಗ 106.17 ರೂ. ಆಗಿದೆ. ಡಿಸೇಲ್ ಬೆಲೆ 90.98 ರೂ. ಇತ್ತು. ಈಗ 94.10 ರೂ. ಆಗಿದೆ.

ಹರ್ಮುಜ್ ಬಿಕ್ಕಟ್ಟಿದ್ದರೂ ದೇಶದಲ್ಲಿ ಇಂಧನ ಪೂರೈಕೆ ಸಮಸ್ಯೆಯಾಗಿಲ್ಲ ಎಂದು ಕೇಂದ್ರ ಸರಕಾರ ಹೇಳುತ್ತಿತ್ತು. ಪೆಟ್ರೋಲ್ ಡೀಸೆಲ್ ಸಂಗ್ರಹಿಸಿಟ್ಟು, ಪ್ಯಾನಿಕ್ ಸ್ಥಿತಿಗೆ ಒಳಗಾಗುವ ಅಗತ್ಯ ಇಲ್ಲ ಎಂದಿತ್ತು. ಅಧಿಕಾರಿಗಳ ಪ್ರಕಾರ 60 ದಿನಗಳಿಗೆ ಬೇಕಾದಷ್ಟು ತೈಲ ಸಂಗ್ರಹಣೆ ಹಾಗೂ 45 ದಿನಗಳಿಗೆ ಬೇಕಾದಷ್ಟು ಎಲ್ ಪಿಜಿ ಸಂಗ್ರಹಣೆಯನ್ನು ನಿರ್ವಹಣೆ ಮಾಡಲಾಗ್ತಿದೆ ಎಂದು ಹೇಳಿದ್ದರು. ಆದರೆ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಯಿಂದ ಉಂಟಾದ ನಷ್ಟದಿಂದಾಗಿ ತೈಲ ಕಂಪನಿಗಳು ಬೆಲೆ ಏರಿಕೆ ಮಾಡಿವೆ.

Share News