• Home  
  • ಪ್ರಸಿದ್ಧ ಹಿನ್ನೆಲೆ ಗಾಯಕಿ ಎಸ್.ಜಾನಕಿ ಕೊನೆಯುಸಿರು
- HOME - LATEST NEWS - STATE

ಪ್ರಸಿದ್ಧ ಹಿನ್ನೆಲೆ ಗಾಯಕಿ ಎಸ್.ಜಾನಕಿ ಕೊನೆಯುಸಿರು

ಮೈಸೂರು: ಭಾರತದ ನೈಟಿಂಗೇಲ್ ಪ್ರಸಿದ್ಧ ಹಿನ್ನೆಲೆ ಗಾಯಕಿ ಎಸ್.ಜಾನಕಿ (88) ಶನಿವಾರ ವಯೋಸಹಜ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ನಗರದ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ‘ಮಗ ಮೃತಪಟ್ಟ ಬಳಿಕ ಮೈಸೂರಿನ ಬೋಗಾದಿಯ ಅವರ ಆಪ್ತರ ಮನೆಯಲ್ಲಿ ವಾಸವಿದ್ದರು. ಈ ಬಗ್ಗೆ ವೈದ್ಯಾಧಿಕಾರಿಗಳು ಹಾಗೂ ಜಾನಕಿ‌ ಕುಟುಂಬಸ್ಥರು ಅಧಿಕೃತ ಮಾಹಿತಿ ನೀಡಿಲ್ಲ. 20ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಹೆಚ್ಚು ಗೀತೆಗಳನ್ನು ಅವರು ಹಾಡಿದ್ದರು. ಅವರ ಸಾವು ಸಂಗೀತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ.  ಈ ವರ್ಷ ಜನವರಿಯಲ್ಲಿ ಜಾನಕಿ ಅವರ […]

Share News

ಮೈಸೂರು: ಭಾರತದ ನೈಟಿಂಗೇಲ್ ಪ್ರಸಿದ್ಧ ಹಿನ್ನೆಲೆ ಗಾಯಕಿ ಎಸ್.ಜಾನಕಿ (88) ಶನಿವಾರ ವಯೋಸಹಜ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ನಗರದ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ‘ಮಗ ಮೃತಪಟ್ಟ ಬಳಿಕ ಮೈಸೂರಿನ ಬೋಗಾದಿಯ ಅವರ ಆಪ್ತರ ಮನೆಯಲ್ಲಿ ವಾಸವಿದ್ದರು. ಈ ಬಗ್ಗೆ ವೈದ್ಯಾಧಿಕಾರಿಗಳು ಹಾಗೂ ಜಾನಕಿ‌ ಕುಟುಂಬಸ್ಥರು ಅಧಿಕೃತ ಮಾಹಿತಿ ನೀಡಿಲ್ಲ.

20ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಹೆಚ್ಚು ಗೀತೆಗಳನ್ನು ಅವರು ಹಾಡಿದ್ದರು. ಅವರ ಸಾವು ಸಂಗೀತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ.  ಈ ವರ್ಷ ಜನವರಿಯಲ್ಲಿ ಜಾನಕಿ ಅವರ ಪುತ್ರ ಮುರಳಿ ಕೃಷ್ಣ ನಿಧನ ಹೊಂದಿದ್ದರು. ಆ ಬಳಿಕ ಪುತ್ರ ಶೋಕ ಅತಿಯಾಗಿ ಕಾಡಿತ್ತು. ಇದರಿಂದ ಅವರ ಆರೋಗ್ಯ ಹದಗೆಟ್ಟಿತ್ತು. ಈಗ ಚಿಕಿತ್ಸೆ ಫಲಕಾರಿಯಾಗದೆ ಅವರು ಮೈಸೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ.

ಜಾನಕಿ ಅವರು ಮೂಲತಃ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯವರು. ಅವರು ತೆಲುಗಿನವರು ಹೆಚ್ಚು ಪ್ರಸಿದ್ಧಿ ಪಡೆದು ಕನ್ನಡಿಗರ ಮನೆಮನಗಳಿಗೆ ಹತ್ತಿರವಾದಗಿದ್ದರು. ಖ್ಯಾತ ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಧ್ವನಿಯಲ್ಲಿ ಮೂಡಿಬಂದ ರೋಮ್ಯಾಂಟಿಕ್ ಹಾಡುಗಳು ಇಂದಿಗೂ ಯುವಕರ ನೆಚ್ಚಿನ ಹಾಡುಗಳಾಗಿವೆ. ಅವರ ಸಾವಿಗೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.

Share News