canaratvnews

ಪ್ರಧಾನ ಮಂತ್ರಿ ನರೇಂದ್ರ ಮೋದಿ ವಂದೇ ಭಾರತ್‌ ರೈಲಿಗೆ ಚಾಲನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲುನಿಲ್ದಾಣದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರಿನಿಂದ ಬೆಳಗಾವಿ ಯ ವಂದೇ ಭಾರತ್‌ ರೈಲಿಗೆ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ ಭಾಗಿಯಾದರು.ಇದೇ ಸಮಯದಲ್ಲಿ ಅಮೃತ್‍ಸರ್ ದಿಂದ ಶ್ರೀ ಮಾತಾ ವೈಷ್ಣೋದೇವಿ ಕತ್ರಾ ಹಾಗೂ ನಾಗ್‍ಪುರ್ (ಅಜ್ನಿ) ಯಿಂದ ಪುಣೆಯ ವರೆಗೆ ಚಲಿಸಲಿರುವ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲುಗಳಿಗೂ ಸಹ ವರ್ಚುವಲ್ ಮೂಲಕ ಚಾಲನೆ ನೀಡಲಾಯಿತು.ಈ ಸಮಯದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವರಾದ ವಿ. ಸೋಮಣ್ಣ, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಸೇರಿದಂತೆ ಗಣ್ಯರು ಅಧಿಕಾರಿಗಳು ಉಪಸ್ಥಿತರಿದ್ದರು.

Share News
Exit mobile version