LATEST NEWS

ಪ್ರಧಾನಿ ಮೋದಿ ಹೆಸರಿನ ಸೇವಾ ಕಾರ್ಯಗಳು ಜನಸೇವೆಗೆ ಇನ್ನಷ್ಟು ಶಕ್ತಿ ನೀಡಲಿ: ಶಾಸಕ ಕಾಮತ್ ಆಶಯ

ಮಂಗಳೂರು: ಪ್ರಧಾನಿ ಶ್ರೀ ನರೇಂದ್ರ ಮೋದಿಯವರ 25 ವರ್ಷಗಳ ನಿರಂತರ ಜನಸೇವೆಯ ಪ್ರಯುಕ್ತ ಹಮ್ಮಿಕೊಳ್ಳಲಾದ ‘ಸೇವಾ ಸಂಕಲ್ಪ ಅಭಿಯಾನ’ದ ಭಾಗವಾಗಿ, ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ, ಆಶಾ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕಿಯರಿಗೆ ಗೌರವ ಸಮರ್ಪಣೆಯ ‘ಅಂಗಳದ ಉತ್ಸವ’ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, “ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಇಡೀ ಜೀವನವನ್ನು ದೇಶಕ್ಕಾಗಿ ಸಮರ್ಪಿಸಿದ್ದಾರೆ. ಅವರ ನಿಸ್ವಾರ್ಥ ಬದುಕು ಮತ್ತು ಕಾರ್ಯವೈಖರಿ ನಮ್ಮಂತಹ ಪ್ರತಿಯೊಬ್ಬ ಕಾರ್ಯಕರ್ತರಿಗೂ ಆದರ್ಶಪ್ರಾಯವಾಗಿದೆ. ಮೋದಿಜೀ ಅವರ ಹೆಸರಿನಲ್ಲಿ ನಡೆಯುತ್ತಿರುವ ಇಂತಹ ಜನಪರ ಸೇವಾ ಕಾರ್ಯಗಳು ಅವರಿಗೆ ದೇಶ ಮತ್ತು ಜನಸೇವೆಗೆ ಇನ್ನಷ್ಟು ಹೆಚ್ಚಿನ ಶಕ್ತಿಯನ್ನು ನೀಡಲಿ” ಎಂದು ಹಾರೈಸಿದರು.

ಇದೇ ಸಂದರ್ಭದಲ್ಲಿ ಸಮಾಜದ ತಳಮಟ್ಟದಲ್ಲಿ ಆರೋಗ್ಯ ಮತ್ತು ಮಕ್ಕಳ ಪೋಷಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಈ ಮಹತ್ವದ ಕಾರ್ಯಕ್ರಮದಲ್ಲಿ ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿಗಳಾದ ಲಲ್ಲೇಶ್ ಕುಮಾರ್, ಜಿಲ್ಲಾ ಕಾರ್ಯದರ್ಶಿ ಪೂರ್ಣಿಮಾ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಂಜುಳಾ ರಾವ್, ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಪೂರ್ಣಿಮಾ ರಾವ್, ಮಂಡಲದ ಯುವ ಮೋರ್ಚಾ ಅಧ್ಯಕ್ಷರಾದ ಅಶ್ವಿತ್ ಕೊಟ್ಟಾರಿ ಉಪಸ್ಥಿತರಿದ್ದರು.

ದಕ್ಷಿಣ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಪ್ರವೀಣ್ ನಿಡ್ಡೆಲ್, ಮಂಡಲದ ಉಪಾಧ್ಯಕ್ಷರಾದ ಕಿರಣ್ ರೈ, ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಸುಕೇಶ್, ಶಕ್ತಿ ಕೇಂದ್ರದ ಅಧ್ಯಕ್ಷರಾದ ಸುರೇಶ್ ಆಚಾರ್, ಮಹಿಳಾ ಮೋರ್ಚಾದ ಪದಾಧಿಕಾರಿಗಳಾದ ಶಬರಿ ಶೆಟ್ಟಿ, ಮಾನಸ ರೈ, ಮಂಡಲ ಕಾರ್ಯದರ್ಶಿ ಸುಮತಿ ಚಂದ್ರ ಶೇಖರ್, ಕ್ಲಬ್ ಅಧ್ಯಕ್ಷರಾದ ಜಿತೇಶ್ ಹಾಗೂ ವಾರ್ಡಿನ ಪ್ರಮುಖರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Share News