HOMELATEST NEWSSTATE

ಸೇನಾ ಹೆಲಿಕಾಪ್ಟರ್‌ನಲ್ಲಿ ಮೈಸೂರಿಗೆ ಬಂದಿಳಿದ ಪ್ರಧಾನಿ ಮೋದಿ

ಮೈಸೂರು: ಐತಿಹಾಸಿಕ ‘ವಿವೇಕ ಸ್ಮಾರಕ’ವನ್ನು (ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ) ಲೋಕಾರ್ಪಣೆಗೊಳಿಸುವ ಸಲುವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮೈಸೂರಿಗೆ ಇಂದು ಆಗಮಿಸಿದ್ದಾರೆ.

ದಿಲ್ಲಿಯಿಂದ ವಿಶೇಷ ವಿಮಾನದಲ್ಲಿ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಅಲ್ಲಿಂದ ಸೇನಾ ಹೆಲಿಕ್ಯಾಪ್ಟರ್ ನಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫಡ್೯ ಹಾಲ್ ಎದುರಿನ ಓವೆಲ್ ಮೈದಾನಕ್ಕೆ ಬಂದಿಳಿದರು.

ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಧಾನಮಂತ್ರಿಗಳಿಗೆ ಶಾಲು ಹಾಕಿ ಪುಷ್ಪಗುಚ್ಛ ನೀಡಿ ಸ್ವಾಗತಿಸಿ ಬರಮಾಡಿಕೊಂಡರು. ಅವರು ನಾರಾಯಣ ಶಾಸ್ತ್ರಿ ರಸ್ತೆಯಲ್ಲಿ ನಿರ್ಮಾಣಗೊಂಡಿರುವ ವಿವೇಕ ಸ್ಮಾರಕ ಭವನ ಉದ್ಘಾಟಿಸಿ ನಂತರ ಕೆ.ಆರ್.ಎಸ್. ರಸ್ತೆಯಲ್ಲಿರುವ ರಾಮಕೃಷ್ಣ ಆಶ್ರಮದ ಶಾಲಾ ಮೈದಾನಕ್ಕೆ ಆಗಮಿಸಿ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

Share News