ಮಂಗಳೂರು, ಜೂನ್ 10: ಪ್ರಧಾನಿ ನರೇಂದ್ರ ಮೋದಿಯವರು 4,399 ದಿನಗಳ ಯಶಸ್ವಿ ಆಡಳಿತ ಪೂರೈಸಿ, ದೇಶದ ದೀರ್ಘಾವಧಿಯ ಚುನಾಯಿತ ಪ್ರಧಾನಿ ಎಂಬ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಸಿಗಲಿ ಮತ್ತು ದೇಶವನ್ನು ಮುನ್ನಡೆಸಲು ಇನ್ನಷ್ಟು ಶಕ್ತಿ ಸಿಗಲಿ ಎಂದು ಪ್ರಾರ್ಥಿಸಿ, ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಇತಿಹಾಸ ಪ್ರಸಿದ್ಧ ಕದ್ರಿ ದೇವಸ್ಥಾನದಲ್ಲಿ ವಿಶೇಷ ರಂಗ ಪೂಜೆ ಶ್ರದ್ಧಾಭಕ್ತಿಯಿಂದ ನಡೆಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವರ್, ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಂಜುಳಾ ರಾವ್, ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ನಂದನ್ ಮಲ್ಯ, ಪ್ರಮುಖರಾದ ಸುಧೀರ್ ಶೆಟ್ಟಿ ಕಣ್ಣೂರು, ಮೋನಪ್ಪ ಭಂಡಾರಿ, ಸಂಜಯ್ ಪ್ರಭು, ನಿತಿನ್ ಕುಮಾರ್, ರಾಜ್ ಗೋಪಾಲ್ ರೈ, ನಿಕಟಪೂರ್ವ ಪಾಲಿಕೆ ಸದಸ್ಯರುಗಳು ಸೇರಿದಂತೆ ವಿವಿಧ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

