• Home  
  • ಭಾರತದ ಶಿಕ್ಷಣ ನೀತಿಯು ಅಂತರ ಶಿಸ್ತೀಯ ಕಲಿಕೆ ಹಾಗೂ ಕೌಶಲ್ಯ ಆಧಾರಿತ ಶಿಕ್ಷಣಕ್ಕೆ ಒತ್ತು ನೀಡುತ್ತಿದೆ: ಪ್ರೊ. ಎಸ್. ಆರ್. ನಿರಂಜನ
- LATEST NEWS

ಭಾರತದ ಶಿಕ್ಷಣ ನೀತಿಯು ಅಂತರ ಶಿಸ್ತೀಯ ಕಲಿಕೆ ಹಾಗೂ ಕೌಶಲ್ಯ ಆಧಾರಿತ ಶಿಕ್ಷಣಕ್ಕೆ ಒತ್ತು ನೀಡುತ್ತಿದೆ: ಪ್ರೊ. ಎಸ್. ಆರ್. ನಿರಂಜನ

ಮಂಗಳೂರು: ಪ್ರಸ್ತುತ ಭಾರತದ ಶಿಕ್ಷಣ ನೀತಿಯು ಅಂತರಶಿಸ್ತೀಯ ಕಲಿಕೆ ಮತ್ತು ಕೌಶಲ್ಯ ಆಧಾರಿತ ಶಿಕ್ಷಣವನ್ನು ಹೆಚ್ಚಾಗಿ ಉತ್ತೇಜಿಸುತ್ತಿದೆ ಎಂದು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿಯ ಉಪಾಧ್ಯಕ್ಷರು ಹಾಗೂ ಗುಲ್ಬರ್ಗ ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿಗಳಾದ ಪ್ರೊ. ಎಸ್. ಆರ್. ನಿರಂಜನ್ ಅವರು ತಿಳಿಸಿದರು. ನಗರದ ಪ್ರಸಿದ್ಧ ಸಂತ ಆಗ್ನೇಸ್ ಕಾಲೇಜು (ಸ್ವಾಯತ್ತ) ಸಂಸ್ಥೆಯ 13ನೇ ಪದವಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಉನ್ನತ ಶಿಕ್ಷಣದ ಅವಿಭಾಜ್ಯ ಅಂಗ “ಕೌಶಲ್ಯ”: ಪ್ರಾಚೀನ ಕಾಲದಲ್ಲೂ ಭಾರತವು […]

Share News
ಮಂಗಳೂರು: ಪ್ರಸ್ತುತ ಭಾರತದ ಶಿಕ್ಷಣ ನೀತಿಯು ಅಂತರಶಿಸ್ತೀಯ ಕಲಿಕೆ ಮತ್ತು ಕೌಶಲ್ಯ ಆಧಾರಿತ ಶಿಕ್ಷಣವನ್ನು ಹೆಚ್ಚಾಗಿ ಉತ್ತೇಜಿಸುತ್ತಿದೆ ಎಂದು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿಯ ಉಪಾಧ್ಯಕ್ಷರು ಹಾಗೂ ಗುಲ್ಬರ್ಗ ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿಗಳಾದ ಪ್ರೊ. ಎಸ್. ಆರ್. ನಿರಂಜನ್ ಅವರು ತಿಳಿಸಿದರು.

ನಗರದ ಪ್ರಸಿದ್ಧ ಸಂತ ಆಗ್ನೇಸ್ ಕಾಲೇಜು (ಸ್ವಾಯತ್ತ) ಸಂಸ್ಥೆಯ 13ನೇ ಪದವಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.

ಉನ್ನತ ಶಿಕ್ಷಣದ ಅವಿಭಾಜ್ಯ ಅಂಗ “ಕೌಶಲ್ಯ”: ಪ್ರಾಚೀನ ಕಾಲದಲ್ಲೂ ಭಾರತವು ಉನ್ನತ ಕಲಿಕೆಗೆ ಜಾಗತಿಕ ಕೇಂದ್ರಸ್ಥಾನವಾಗಿತ್ತು. ಇಲ್ಲಿನ ನಳಂದ, ತಕ್ಷಶಿಲಾ ವಿಶ್ವವಿದ್ಯಾಲಯಗಳಲ್ಲಿ ಭಾರತೀಯರಷ್ಟೇ ಅಲ್ಲದೆ ವಿದೇಶಿ ವಿದ್ಯಾರ್ಥಿಗಳೂ ಕಲಿಯುತ್ತಿದ್ದರು ಎಂದು ಪ್ರೊ. ನಿರಂಜನ ನೆನಪಿಸಿದರು. “ಇಂದು ಕೌಶಲ್ಯ ಶಿಕ್ಷಣವು ಉನ್ನತ ಶಿಕ್ಷಣದ ಅವಿಭಾಜ್ಯ ಅಂಗವಾಗಿದೆ. ವಿದ್ಯಾರ್ಥಿಗಳ ವಿಮರ್ಶಾತ್ಮಕ ಚಿಂತನೆ, ಸೃಜನಶೀಲತೆ ಹಾಗೂ ವ್ಯಕ್ತಿತ್ವ ಅಭಿವೃದ್ಧಿಗಾಗಿ ಡಿಜಿಟಲ್ ಸಾಕ್ಷರತೆ, ಕೃತಕ ಬುದ್ಧಿಮತ್ತೆ (AI) ಮತ್ತು ಸಂವಹನ ಕೌಶಲ್ಯಗಳನ್ನು ಅಳವಡಿಸಿಕೊಳ್ಳುವುದು ಇಂದಿನ ದಿನಗಳಲ್ಲಿ ಅತ್ಯಂತ ಅನಿವಾರ್ಯವಾಗಿದೆ” ಎಂದು ಅವರು ಪ್ರತಿಪಾದಿಸಿದರು.

ದೇಶದ ಜಿಡಿಪಿ ಹೆಚ್ಚಳಕ್ಕೆ ಶಿಕ್ಷಣವೇ ದಾರಿ: ಶಿಕ್ಷಣವು ಕೇವಲ ಅಂಕಗಳಿಗೆ ಸೀಮಿತವಾಗದೆ ವ್ಯಕ್ತಿಯ ದೇಹ, ಮನಸ್ಸು ಮತ್ತು ಒಟ್ಟಾರೆ ವ್ಯಕ್ತಿತ್ವವನ್ನು ರೂಪಿಸುವ ಮತ್ತು ಬಲಪಡಿಸುವ ಶಕ್ತಿಯಾಗಿದೆ. ಭಾರತವು ಸದ್ಯ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ವಿವಿಧ ಸವಾಲುಗಳನ್ನು ಎದುರಿಸುತ್ತಿದೆ. ದೇಶದ ತಲಾವಾರು ಜಿಡಿಪಿ (GDP) ಹೆಚ್ಚಿಸಲು ಮತ್ತು ಭವಿಷ್ಯದ ಬೆಳವಣಿಗೆಯ ದೃಷ್ಟಿಯಿಂದ ಉನ್ನತ ಶಿಕ್ಷಣಕ್ಕೆ ನಾವೆಲ್ಲರೂ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕಾಗಿದೆ ಎಂದು ಅವರು ಕರೆ ನೀಡಿದರು.

ಶತಮಾನದ ಗುಣಮಟ್ಟದ ಶಿಕ್ಷಣ: ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಪೋಸ್ಟೊಲಿಕ್ ಕಾರ್ಮೆಲ್ ಕರ್ನಾಟಕ ಪ್ರಾಂತದ ಪ್ರಾಂತೀಯ ಸುಪೀರಿಯರ್ ಸಿ. ಮರಿಯಾ ನವೀನ ಎ.ಸಿ. ಮಾತನಾಡಿ, “ಸಂತ ಆಗ್ನೇಸ್ ಕಾಲೇಜು ಕಳೆದ ಒಂದು ಶತಮಾನದಿಂದಲೂ ಗುಣಮಟ್ಟದ ಶಿಕ್ಷಣಕ್ಕೆ ಹೆಸರುವಾಸಿಯಾಗಿದೆ. ಕೇವಲ ಪಠ್ಯಕ್ಕೆ ಮಾತ್ರ ಸೀಮಿತವಾಗದೆ ಪಠ್ಯೇತರ ಚಟುವಟಿಕೆಗಳಿಗೂ ಸಮಾನ ಆದ್ಯತೆ ನೀಡುವ ಮೂಲಕ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಸಂಸ್ಥೆಯು ನಿರಂತರ ಪ್ರೋತ್ಸಾಹ ನೀಡುತ್ತಿದೆ” ಎಂದರು.

ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದ ೬೪೭ ವಿದ್ಯಾರ್ಥಿಗಳು ಪದವಿ ಸ್ವೀಕರಿಸಿದರು. ಉನ್ನತ ರ್ಯಾಂಕ್ ಗಳಿಸಿದ ೨೨ ವಿದ್ಯಾರ್ಥಿಗಳನ್ನು ವಿಶೇಷವಾಗಿ ಅಭಿನಂದಿಸಲಾಯಿತು.
ಪ್ರಾಶುಂಪಾಲೆ ಸಿ. ಡಾ. ಎಂ. ವೆನಿಸ್ಸಾ ಎ.ಸಿ. ಅವರು ನೂತನ ಪದವೀಧರರಿಗೆ ಪ್ರತಿಜ್ನಾ ವಿಧಿ ಬೋಧಿಸಿದರು. ಸಂತ ಆಗ್ನೇಸ್ ಶಿಕ್ಷಣ ಸಂಸ್ಥೆಗಳ ಜೊತೆ ಕಾರ್ಯದರ್ಶಿ ಸಿ. ಡಾ. ಎಂ. ಪ್ರೇಮ್ ಡಿಸೋಜಾ ಎ.ಸಿ., ಪಿ.ಜಿ. ಸಂಯೋಜಕಿ ಸಿ. ಡಾ. ಎಂ. ವಿನೋರಾ ಎ.ಸಿ., ಕಾಲೇಜಿನ ರಿಜಿಸ್ಟ್ರಾರ್ ಪ್ರೋ. ಶುಭರೇಖಾ, ಮಂಗಳೂರು ವಿಶ್ವವಿದ್ಯಾನಿಲಯದ ಪ್ರತಿನಿಧಿ ಪ್ರೊ. ಸಂಗಪ್ಪ, ಶಿಕ್ಷಣ ತಜ್ಞ ಡಾ. ಸಂತೋಷ್ ರೆಬೆಲ್ಲೋ, ಆಡಳಿತ ಡೀನ್ ಶಾಂತಿ ನಜರೇತ್ ಹಾಗೂ ವಿವಿಧ ವಿಭಾಗಗಳ ಡೀನ್ ಗಳು, ಆಡಳಿತ ಮಂಡಳಿ ಹಾಗೂ ಶೈಕ್ಷಣಿಕ ಮಂಡಳಿ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.
ವಾಣಿಜ್ಯ ವಿಭಾಗದ ಡಾ. ದೇವಿಪ್ರಭಾ ಆಳ್ವ ಸ್ವಾಗತಿಸಿ, ಸ್ನಾತಕೋತ್ತರ ಆಡಳಿತ ನಿರ್ವಹಣಾ ವಿಭಾಗದ ಡಾ. ಮಲ್ಲಿಕಾ ಶೆಟ್ಟಿ ವಂದಿಸಿದರು. ರಸಾಯನ ಶಾಸ್ತ್ರ ವಿಭಾಗದ ಪ್ರೋ. ಹೆಲೆನ್ ಸೆರಾವೊ ಕಾರ್ಯಕ್ರಮ ನಿರೂಪಿಸಿದರು.

Share News