canaratvnews

ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಮಂಗಳೂರಿನಲ್ಲಿ ಏ.29 ರಂದು ಬೃಹತ್‌ ಪ್ರತಿಭಟನೆ

ಮಂಗಳೂರು: ಕೇಂದ್ರ ಸರಕಾರದ ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಮುಸ್ಲಿಮ್ ಸೆಂಟ್ರಲ್ ಕಮಿಟಿಯ ನೇತೃತ್ವದಲ್ಲಿ ಮಂಗಳೂರು ಹೊರವಲಯದ ಅಡ್ಯಾರ್‌ ಕಣ್ಣೂರಿನಲ್ಲಿ ಎ.29ರಂದು ಬೃಹತ್‌ ಪ್ರತಿಭಟನೆ ನಡೆಯಲಿದೆ.

ಅಂದು ಸಂಜೆ 3 ಗಂಟೆಗೆ ಮಂಗಳೂರು ಹೊರವಲಯದ ಅಡ್ಯಾರ್ ಕಣ್ಣೂರಿನ ಶಾ ಗಾರ್ಡನ್‌ನಲ್ಲಿ ಪ್ರತಿಭಟನಾ ಸಮಾವೇಶ ಹಮ್ಮಿ ಕೊಳ್ಳಲಾಗಿದೆ.ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಹಾಜಿ ಕೆ.ಎಸ್.ಮುಹಮ್ಮದ್ ಮಸೂದ್‌ರ ನೇತೃತ್ವದಲ್ಲಿ ಶನಿವಾರ ನಡೆದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.

ಈ ಪ್ರತಿಭಟನೆಯಲ್ಲಿ ದ.ಕ- ಉಡುಪಿ ಜಿಲ್ಲೆಯ ಲಕ್ಷಾಂತರ ಜನರ ಜೊತೆಗೆ ಉಲಮಾಗಳು ಸಹ ಭಾಗವಹಿಸಲಿದ್ದಾರೆ.

Share News
Exit mobile version