DAKSHINA KANNADAHOMELATEST NEWS

ನಾಗರಪಂಚಮಿ ಪ್ರಯುಕ್ತ ಆಗಸ್ಟ್ 17ರ ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾರ್ವತ್ರಿಕ ರಜೆ ಘೋಷಣೆ

ಮಂಗಳೂರು: ನಾಗರಪಂಚಮಿ ಹಬ್ಬದ ಪ್ರಯುಕ್ತ ನಾಳೆ, ಆಗಸ್ಟ್ 17ರ ಸೋಮವಾರದಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾರ್ವತ್ರಿಕ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಕರಾವಳಿ ಜಿಲ್ಲೆಯಲ್ಲಿ ನಾಗಾರಾಧನೆಗೆ ವಿಶೇಷ ಮಹತ್ವವಿದ್ದು, ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಸಡಗರ ಹಾಗೂ ಧಾರ್ಮಿಕ ಶ್ರದ್ಧೆಯೊಂದಿಗೆ ಹಬ್ಬವನ್ನು ಆಚರಿಸಲು ಅನುಕೂಲವಾಗುವಂತೆ ಈ ರಜೆಯನ್ನು ನೀಡಲಾಗಿದೆ. ಸೋಮವಾರದಂದು ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು ಹಾಗೂ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಈ ಸಾರ್ವತ್ರಿಕ ರಜೆ ಅನ್ವಯವಾಗಲಿದೆ.

ನಾಗಬನಗಳು ಹಾಗೂ ದೇವಸ್ಥಾನಗಳಲ್ಲಿ ವಿಶೇಷ ಪೂಜೆ-ಪುನಸ್ಕಾರಗಳು ನಡೆಯಲಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಈ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

Share News