ಬೆಂಗಳೂರು : 2024-25ನೇ ಸಾಲಿನ ರಾಜ್ಯ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಲಾಗಿದ್ದು, ಶೇ.73.45 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಯನ್ನು 6,37,805 ವಿದ್ಯಾರ್ಥಿಗಳು ಬರೆದಿದ್ದರು. ಈ ಪೈಕಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಒಟ್ಟಾರೆ ಶೇಕಡಾ 73.45ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ ಶೇಕಡಾ 53.29ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇಕಡಾ 76.07ರಷ್ಟು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಶೇಕಡಾ 82.54ರಷ್ಟು ಉತ್ತೀರ್ಣರಾಗಿದ್ದಾರೆ.
ಶೇಕಡಾವರು ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಪ್ರಥಮ ಸ್ಥಾನ, ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಗಳಿಸಿದೆ. 93.90 ಶೇ. ಫಲಿತಾಂಶ ಪಡೆದು ಉಡುಪಿ ಮೊದಲ ಸ್ಥಾನದಲ್ಲಿದೆ. ಯಾದಗಿರಿ ಜಿಲ್ಲೆಯು ಶೇ.48.45 ಫಲಿತಾಂಶ ಪಡೆದು ಕೊನೆಯ ಸ್ಥಾನದಲ್ಲಿದೆ.
ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಕಾಮತ್ ಮೊದಲ ಸ್ಥಾನ ಪಡೆದಿದ್ದಾರೆ. ದಕ್ಷಿಣ ಕನ್ನಡದ ಎಕ್ಸ್ಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ದೀಪಶ್ರೀ ಗೆ ಮೊದಲ ಸ್ಥಾನ ಪಡೆದಿದ್ದು,
ದಕ್ಷಿಣ ಕನ್ನಡದ ಕೆನಾರ ಪಿಯು ಕಾಲೇಜು ವಿದ್ಯಾರ್ಥಿನಿಯಾಗಿದ್ದಾರೆ. ಕಲಾ ವಿಭಾಗದಲ್ಲಿ ಸಂಜನಾ ಬಾಯಿ ಪ್ರಥಮ ಸ್ಥಾನ ಪಡೆದಿದ್ದಾರೆ. ಬಳ್ಳಾರಿ ಜಿಲ್ಲೆಯ ಇಂದು ಪಿಯು ಕಾಲೇಜು ವಿದ್ಯಾರ್ಥಿನಿಯಾಗಿದ್ದಾರೆ.
ವಿದ್ಯಾರ್ಥಿನಿಯರದ್ದೇ ಮೇಲುಗೈ:
ದ್ವಿತೀಯ ಪಿಯುಸಿ ಪರೀಕ್ಷೆಗೆ 2,92,111 ಬಾಲಕರು ಹಾಜರಾಗಿದ್ದರು, ಇದರ ಪೈಕಿ 1,99,227 ಬಾಲಕರು ತೇರ್ಗಡೆ ಹೊಂಡಿದ್ದಾರೆ. ಬಾಲಕರ ಶೇಕಡವಾರು ಉತ್ತೀರ್ಣ ಶೇ.68.20 ಇದೆ. ಹಾಗೆಯೇ 3,45,694 ಬಾಕಿಯರು ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ 2,69,212 ಬಾಲಕಿಯುರು ಉತ್ತೀರ್ಣರಾಗಿದ್ದಾರೆ. ಬಾಲಕಿಯರ ಶೇಕಡವಾರು ಉತ್ತೀರ್ಣ ಶೇ.77.88 ಇದೆ.