ಧರ್ಮಸ್ಥಳ : ಮಾರ್ಚ್ 3ಕ್ಕೆ ಚಂದ್ರಗ್ರಹಣ ಸಂಭವಿಸುತ್ತಿದ್ದು, ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದಲ್ಲಿ ಪೂಜಾ ಸಮಯ ಬದಲಾವಣೆ ಆಗಿದೆ.
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಭಕ್ತಾದಿಗಳ ದೇವರ ದರ್ಶನ ಸಮಯವನ್ನು ತಾತ್ಕಾಲಿಕವಾಗಿ ಬದಲಾಯಿಸಲಾಗಿದೆ. ದೇವಸ್ಥಾನದ ಆಡಳಿತ ಮಂಡಳಿಯು ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.
ಭಕ್ತಾದಿಗಳು ಈ ಬದಲಾದ ದರ್ಶನ ಸಮಯಗಳನ್ನು ಗಮನದಲ್ಲಿಟ್ಟುಕೊಂಡು ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನಕ್ಕೆ ಆಗಮಿಸುವಂತೆ ಧರ್ಮಸ್ಥಳ ದೇವಸ್ಥಾನ ಆಡಳಿತ ಮಂಡಳಿ ವಿನಂತಿಸಿದೆ.

