canaratvnews

*ಪಂಪ್ ವೆಲ್ ಮೂಲಕ ಮಂಗಳೂರಿಗೆ ತೆರಳುವವರೇ ಹುಷಾರ್*

ಮಂಗಳೂರು, ಫೆ.15: ಪಂಪ್ ವೆಲ್ ನಿಂದ ಕಂಕನಾಡಿಗೆ ತೆರಳುವ ಮುಖ್ಯ ರಸ್ತೆಯ ಅಭಿವೃದ್ಧಿ ಯ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂದಿಸಿ ನಾಳೆಯಿಂದ ಕಾಮಗಾರಿ ಆರಂಭಗೊಳ್ಳಲಿದೆ. ಆ ಸಮಯದಲ್ಲಿ ನಗರಕ್ಕೆ ತೆರಳುವ ವಾಹನಗಳಿಗೆ ಸಮಸ್ಯೆಯಾಗಲಿದ್ದು, ವಾಹನ ಸಂಚಾರಕ್ಕೆ ಪೊಲೀಸ್ ಇಲಾಖೆ ಪರ್ಯಾಯ ಮಾರ್ಗಗಳನ್ನು ಗೊತ್ತುಪಡಿಸಿದೆ.
ಪಂಪ್‌ವೆಲ್ ಜಂಕ್ಷನ್ ನಿಂದ ಕರಾವಳಿ ಜಂಕ್ಷನ್‌ಗೆ ಹೋಗುವ ವಾಹನಗಳನ್ನು ನಿರ್ಬಂದಿಸಿ, ಕಂಕನಾಡಿ ಹಳೆ ರಸ್ತೆ ಮೂಲಕ ಸಂಚರಿಸಲು ಅನುವು ಮಾಡಿಕೊಡಲಾಗಿದೆ.


ತಲಪಾಡಿ, ತೊಕ್ಕೊಟ್ಟು ಕಡೆಯಿಂದ ಮಂಗಳೂರು ನಗರಕ್ಕೆ ಪ್ರವೇಶಿಸುವ ವಾಹನಗಳು ಪರ್ಯಾಯ ರಸ್ತೆಯಾದ ಮಹಾಕಾಳಿಪಡ್ಡು, ಮಾರ್ಗನ್ಸ್‌ ಗೇಟ್‌, ಕೋಟಿಚೆನ್ನಯ ಸರ್ಕಲ್ ಅಥವಾ ಮಂಗಳಾದೇವಿ ಮುಖಾಂತರ ಸಂಚರಿಸಬಹುದು.

ಬಿ.ಸಿ. ರೋಡ್ ಕಡೆಯಿಂದ ಬರುವ ಘನ ವಾಹನಗಳು, ಇತರ ವಾಹನಗಳು ಮತ್ತು ಲಾಲ್‌ಬಾಗ್ ಬಸ್ ನಿಲ್ದಾಣಕ್ಕೆ ತೆರಳುವ ಕೆಎಸ್ಸಾರ್ಟಿಸಿ ಬಸ್ ಪಡೀಲ್ ಜಂಕ್ಷನ್‌ನಿಂದ ನಂತೂರು ಕಡೆಗೆ ಚಲಿಸಬೇಕು. ಕಾಸರಗೋಡು ಕಡೆಯಿಂದ ಕರಾವಳಿ ಕಡೆಗೆ ಬರುವ ಭಾರಿ ವಾಹನಗಳು ಮತ್ತು ಕೆಎಸ್ಸಾರ್ಟಿಸಿ ಬಸ್‌ಗಳು ಪಂಪ್‌ವೆಲ್ ಜಂಕ್ಷನ್ ನಿಂದ ನಂತೂರು ಮೂಲಕ ಸಂಚರಿಸಬೇಕು.


ನಗರದಿಂದ ಕರಾವಳಿ ಜಂಕ್ಷನ್ ಪಂಪ್ ವೆಲ್ ಕಡೆಗೆ ಸಂಚರಿಸುವ ವಾಹನಗಳು ಯಥಾಸ್ಥಿತಿ ಸಂಚರಿಸಬೇಕು.

ಕಂಕನಾಡಿ ಜಂಕ್ಷನ್-ಪಂಪ್ ವೆಲ್ ರಸ್ತೆ (ಕಂಕನಾಡಿ ಓಲ್ಡ್ ರಸ್ತೆ), ಕರಾವಳಿ-ಕಂಕನಾಡಿ ರಸ್ತೆ, ಕಂಕನಾಡಿ-ಫರ್‌ಹೈಲ್ಯಾಂಡ್ ಆಸ್ಪತ್ರೆ ರಸ್ತೆ, ಕರಾವಳಿ-ಬಲ್ಮಠ ರಸ್ತೆ ಹಾಗೂ ಕಂಕನಾಡಿ ಬೈಪಾಸ್ ರಸ್ತೆಯ ಎರಡೂ ಕಡೆಗಳಲ್ಲಿ ವಾಹನ ನಿಲುಗಡೆ ಮಾಡುವಂತಿಲ್ಲ.

Share News
Exit mobile version