• Home  
  • ಪುತ್ತೂರು 4 ಕಾಲೇಜುಗಳಿಗೆ ಅನುದಾನಕ್ಕೆ ಶಾಸಕ ಅಶೋಕ್ ರೈ ಅವರು ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್ ಅವರಿಗೆ ಮನವಿ
- STATE

ಪುತ್ತೂರು 4 ಕಾಲೇಜುಗಳಿಗೆ ಅನುದಾನಕ್ಕೆ ಶಾಸಕ ಅಶೋಕ್ ರೈ ಅವರು ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್ ಅವರಿಗೆ ಮನವಿ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಲ್ಕು ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅಭಿವೃದ್ದಿಗೆ ಅನುದಾನಕ್ಕಾಗಿ ಶಾಸಕ ಅಶೋಕ್ ರೈ ಅವರು ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಗುರುವಾರ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಶಾಸಕರು ಪುತ್ತೂರಿನ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿಗೆ ೪ ಕೋಟಿ, ವಿಟ್ಲ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨ ಕೋಟಿ, ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨ ಕೋಟಿ ಹಾಗೂ ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨ ಕೋಟಿ ಅನುದಾನ ನೀಡುವಂತೆ ಮನವಿ ಸಲ್ಲಿಸಿದ್ದಾರೆ. ಈ ನಾಲ್ಕು ಕಾಲೇಜುಗಳ ಅಭಿವೃದ್ದಿಗೆ ಅನುದಾನ ಅಗತ್ಯವಾಗಿದ್ದು ಗ್ರಾಮಾಂತರ ಪ್ರದೇಶದ ಹೆಚ್ಚಿನ ವಿದ್ಯಾರ್ಥಿಗಳು ಈ ನಾಲ್ಕು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಕಾಲೇಜಿಗೆ ತರಗತಿ ಕೊಠಡಿ, ಗ್ರಂಥಾಲಯ, ಲ್ಯಾಬೋರೇಠರಿ ಸೇರಿದಂತೆ ಅಗತ್ಯ ಅಭಿವೃದ್ದಿ ಕೆಲಸಗಳು ನಡೆಯಬೇಕಿದೆ ಎಂದು ಸಚಿವರಿಗೆ ಶಾಸಕರು ತಿಳಿಸಿದ್ದಾರೆ.

Share News

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678