• Home  
  • ಪೆರುವಾಯಿ: ರಸ್ತೆ ಸಂಪರ್ಕವಿಲ್ಲದ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಅಶೋಕ್‌ ರೈ
- DAKSHINA KANNADA - HOME - LATEST NEWS

ಪೆರುವಾಯಿ: ರಸ್ತೆ ಸಂಪರ್ಕವಿಲ್ಲದ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಅಶೋಕ್‌ ರೈ

ವಿಟ್ಲ: ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ಬದಿಯಾರು ಎಂಬಲ್ಲಿ 15ಕ್ಕೂ ಹೆಚ್ಚು ಮನೆಗಳಿಗೆ ರಸ್ತೆ ಸಂಪರ್ಕ ಇಲ್ಲದಾಗಿದ್ದು, ಸ್ಥಳೀಯರ ಬೇಡಿಕೆಯ ಮೇರೆಗೆ ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಕೆಲ ದಿನಗಳ ಹಿಂದೆ ಇದೇ ಸ್ಥಳಿಯರು ಶಾಸಕರ ಬಳಿ ತೆರಳಿ ತಮಗೆ ರಸ್ತೆ ಇಲ್ಲದಿರುವ ಬಗ್ಗೆ ಅಳಲು ತೋಡಿಕೊಂಡಿದ್ದರು. ರಸ್ತೆಯಾಗಬೇಕಾದರೆ ಖಾಸಗಿ ವ್ಯಕ್ತಿಗಳು ಜಾಗ ಬಿಟ್ಟುಕೊಡಬೇಕಾಗುತ್ತದೆ. ಇಷ್ಟು ವರ್ಷದಲ್ಲಿ ನಾವು ಮಾಡಿದ ಪ್ರಯತ್ನವೆಲ್ಲವೂ ವಿಫಲವಾಗಿದೆ. ರಾಜಕೀಯ ನೇತಾರರು ಈ ಹಿಂದೆ ಭರವಸೆಯನ್ನು ಮಾತ್ರ […]

Share News

ವಿಟ್ಲ: ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ಬದಿಯಾರು ಎಂಬಲ್ಲಿ 15ಕ್ಕೂ ಹೆಚ್ಚು ಮನೆಗಳಿಗೆ ರಸ್ತೆ ಸಂಪರ್ಕ ಇಲ್ಲದಾಗಿದ್ದು, ಸ್ಥಳೀಯರ ಬೇಡಿಕೆಯ ಮೇರೆಗೆ ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಕೆಲ ದಿನಗಳ ಹಿಂದೆ ಇದೇ ಸ್ಥಳಿಯರು ಶಾಸಕರ ಬಳಿ ತೆರಳಿ ತಮಗೆ ರಸ್ತೆ ಇಲ್ಲದಿರುವ ಬಗ್ಗೆ ಅಳಲು ತೋಡಿಕೊಂಡಿದ್ದರು. ರಸ್ತೆಯಾಗಬೇಕಾದರೆ ಖಾಸಗಿ ವ್ಯಕ್ತಿಗಳು ಜಾಗ ಬಿಟ್ಟುಕೊಡಬೇಕಾಗುತ್ತದೆ. ಇಷ್ಟು ವರ್ಷದಲ್ಲಿ ನಾವು ಮಾಡಿದ ಪ್ರಯತ್ನವೆಲ್ಲವೂ ವಿಫಲವಾಗಿದೆ.

ರಾಜಕೀಯ ನೇತಾರರು ಈ ಹಿಂದೆ ಭರವಸೆಯನ್ನು ಮಾತ್ರ ಕೊಟ್ಟಿದ್ದಾರೆ ವಿನಾ ನಮ್ಮ ಸಮಸ್ಯೆ ಪರಿಹಾರ ಮಾಡಿಲ್ಲ. ಖಾಸಗಿ ವ್ಯಕ್ತಿಗಳ ಜೊತೆ ಮಾತುಕತೆ ನಡೆಸಿ ನಮ್ಮ ಪ್ರದೇಶಕ್ಕೆ ರಸ್ತೆಯನ್ನು ನಿರ್ಮಾಣ ಮಾಡಿ ಕೊಡುತ್ತೀರಿ ಎಂದು ಹೇಳಿದ್ದರು. ಅದರಂತೆ ಇಂದು ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಸ್ಥಳೀಯ ಖಾಸಗೀ ಭೂಮಲಕನ ಬಳಿಯೂ ಮಾತುಕತೆ ನಡೆಸಿದ್ದಾರೆ.

ಭೂ ಮಾಲಕರೂ ತಾತ್ವಿಕ ಒಪ್ಪಿಗೆ ನೀಡಿದ್ದು, ಶೀಘ್ರದಲ್ಲಿಯೇ ಶಾಸಕರ ಕಚೇರಿಗೆ ಬಂದು ತಮ್ಮ ಅಭಿಪ್ರಾಯ ತಿಳಿಸಲಿದ್ದಾರೆ ಎಂದು ಶಾಸಕರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಇದೇ ವೇಳೆ ರಸ್ತೆ ವೀಕ್ಷಣೆ ವೇಳೆ ಮುಸ್ಲಿಂ ಸಮುದಾಯಕ್ಕೆ ಸೇರಿದ ವೃದ್ದರೋರ್ವರು ರಸ್ತೆ ಇಲ್ಲದ ಕಾರಣ ನನ್ನ‌ಮನೆಗೆ ಬೀಗ ಹಾಕಿ ವರ್ಷಗಳೇ ಕಳೆದಿದೆ ನಾನು ನನ್ನ ಕುಟುಂಬ ಬಾಡಿಗೆ ಮನೆಯಲ್ಲಿದ್ದೇವೆ.‌ನಮ್ಮ‌ಮನೆಗೆ ಬರಲು ರಸ್ತೆ ವ್ಯವಸ್ಥೆ ಮಾಡಿ ಕೊಡಿ ಎಂದು ಶಾಸಕರಲ್ಲಿ‌ಮನವಿ ಮಾಡುತ್ತಾರೆ.‌ ಈ ವೇಳೆ ನಿಮ್ಮೆಲ್ಲರ ಆಸೆ ಈಡೇರಬಹುದು ಎಂದು ಅಭಯ ನೀಡಿದ್ದಾರೆ.

Share News