ಉಡುಪಿ: ಜಿಲ್ಲೆಯಲ್ಲಿ ಸತತ ಭಾರೀ ಮಳೆಯಾಗುತ್ತಿರುವುದರಿಂದ
ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಆ.19 ರಂದು (ಮಂಗಳವಾರ) ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿಪೂರ್ವ ಕಾಲೇಜು ಮತ್ತು ಐಟಿಐಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸೋಮವಾರ ರಾತ್ರಿ ಆದೇಶ ಹೊರಡಿಸಿದ್ದಾರೆ. ಭಾರೀ ಮಳೆ ಹಿನ್ನಲೆಯಲ್ಲಿ ಸೋಮವಾರ ರಜೆ ಘೋಷಣೆ ಮಾಡಲಾಗಿತ್ತು.

ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ರಜೆ ಇಲ್ಲ.