ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, 9 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ವಿಜಯನಗರ, ಮೈಸೂರು, ಹಾಸನ, ದಾವಣಗೆರೆ, ಕೊಪ್ಪಳ, ರಾಯಚೂರು, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮಂಗಳವಾರ ರಾತ್ರಿ ಬೆಂಗಳೂರು ಸೇರಿ ಕರ್ನಾಟಕದ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಮುಂಗಾರು ಪೂರ್ವ ಮಳೆ ಹೊಯ್ದು ಮುಂಗಾರು ಆರಂಭವಾದ ಬಳಿಕ ಮಳೆಯೇ ಇರಲಿಲ್ಲ, ಈಗ ಮತ್ತೆ ಜೂನ್ 10ರಿಂದ ಮುಂಗಾರು ಚುರುಕುಗೊಂಡಿದೆ.