canaratvnews

ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ..!

ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, 9 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ವಿಜಯನಗರ, ಮೈಸೂರು, ಹಾಸನ, ದಾವಣಗೆರೆ, ಕೊಪ್ಪಳ, ರಾಯಚೂರು, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಮಂಗಳವಾರ ರಾತ್ರಿ ಬೆಂಗಳೂರು ಸೇರಿ ಕರ್ನಾಟಕದ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಮುಂಗಾರು ಪೂರ್ವ ಮಳೆ ಹೊಯ್ದು ಮುಂಗಾರು ಆರಂಭವಾದ ಬಳಿಕ ಮಳೆಯೇ ಇರಲಿಲ್ಲ, ಈಗ ಮತ್ತೆ ಜೂನ್ 10ರಿಂದ ಮುಂಗಾರು ಚುರುಕುಗೊಂಡಿದೆ.

Share News
Exit mobile version