ಮಂಗಳೂರು: ದಕ್ಷಿಣ ಕನ್ನಡದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಮತ್ತು ಬಿಜೆಪಿ ಮುಖಂಡರಾಗಿದ್ದ ಸತೀಶ್ ಪ್ರಭು ಅವರು ಇಂದು ನಿಧನ ಹೊಂದಿದ್ದಾರೆ.

ಬೆಳಗ್ಗೆ ಏಕಾಏಕಿ ಬ್ರೈನ್ ಹ್ಯಾಮರೇಜ್ ಗೆ ಒಳಗಾಗಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಧ್ಯಾಹ್ನ ವೇಳೆಗೆ ನಿಧನ ಹೊಂದಿದ್ದಾರೆ. ಸತೀಶ್ ಪ್ರಭು ಅವರು ಪ್ರಸ್ತುತ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವಕ್ತಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮಂಗಳೂರಿನ ಕಾರ್ ಸ್ಟ್ರೀಟ್ ಶ್ರೀ ವೆಂಕಟರಮಣ ದೇವಸ್ಥಾನದ ಟ್ರಸ್ಟಿಯಾಗಿದ್ದರು. ಸಂಘನಿಕೇತನದಲ್ಲಿ ಕೇಶವ ಸ್ಮೃತಿ ಸಂವರ್ಧನ ಸಮಿತಿ ವತಿಯಿಂದ ನಡೆಯುತ್ತಿರುವ ಗಣೇಶೋತ್ಸವದಲ್ಲಿ ಸಕ್ರಿಯವಾಗಿ ಭಾಗಿಯಾಗುತ್ತಿದ್ದರು. ಈ ಹಿಂದೆ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು.

