ಬಂಟ್ವಾಳ: ಮತದಾರರ ಹಕ್ಕು ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಜವಾಬ್ದಾರಿಯಾಗಿದೆ ಎಂದು ಮಾಜಿ ಸಚಿವರು ಹಾಗೂ ಕೆಪಿಸಿಸಿ ಉಪಾಧ್ಯಕ್ಷರಾದ ಶ್ರೀ ಬಿ. ರಮಾನಾಥ ರೈ ತಿಳಿಸಿದ್ದಾರೆ.

ಉಳಿ ಹಾಗೂ ಬಡಕಜೆಕಾರು ವಲಯ ಕಾಂಗ್ರೆಸ್ ಸಮಿತಿಗಳ ಜಂಟಿ ಆಶ್ರಯದಲ್ಲಿ ಜೂನ್ 27ರಂದು ಪಂಡವರಕಲ್ಲು ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಎಸ್.ಐ.ಆರ್. (SIR) ಜಾಗೃತಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಸಾರ್ವಜನಿಕರಲ್ಲಿ ಎಸ್.ಐ.ಆರ್. ಪ್ರಕ್ರಿಯೆಯ ಕುರಿತು ವ್ಯಾಪಕ ಜಾಗೃತಿ ಮೂಡಿಸುವ ತುರ್ತು ಅಗತ್ಯವಿದೆ ಎಂದ ಅವರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರತಿಯೊಂದು ಮನೆ ಮನೆಗೆ ತೆರಳಿ ಜನರಿಗೆ ಈ ಬಗ್ಗೆ ಸೂಕ್ತ ಮಾಹಿತಿ ಮತ್ತು ಮಾರ್ಗದರ್ಶನ ನೀಡಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್. ಅಂಚನ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಜ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಪದ್ಮಶೇಖರ್ ಜೈನ್ ಹಾಗೂ ಪ್ರಮುಖರಾದ ಪ್ರವೀಣ್ ರೊಡ್ರಿಗಸ್ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಉಳಿ ವಲಯ ಕಾಂಗ್ರೆಸ್ ಅಧ್ಯಕ್ಷ ವಿಶ್ವನಾಥ್ ಬಿತ್ತ, ಬಡಕಜೆಕಾರು ವಲಯ ಕಾಂಗ್ರೆಸ್ ಅಧ್ಯಕ್ಷ ವಸಂತ್ ಮಿತ್ತೊಟ್ಟು, ಜಯ ಬಂಗೇರ, ಡೀಕಯ ಬಂಗೇರ ಸೇರಿದಂತೆ ವಿವಿಧ ಬೂತ್ ಅಧ್ಯಕ್ಷರು, ಬಿ.ಎಲ್.ಎ.ಗಳು ಹಾಗೂ ಪಕ್ಷದ ನೂರಾರು ಕಾರ್ಯಕರ್ತರು ಸಭೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.