DAKSHINA KANNADALATEST NEWS

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಅ. 2 ರಂದು “ಸದ್ಭಾವನಾ ಕಾಲ್ನಡಿಗೆ”

ಮಂಗಳೂರು: ಮಹಾತ್ಮಾ ಗಾಂಧೀಜಿಯವರ ಜನ್ಮದಿನೋತ್ಸವದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಅಕ್ಟೋಬರ್ 2ರ ಶುಕ್ರವಾರದಂದು ಮಂಗಳೂರಿನಲ್ಲಿ ಬೃಹತ್ “ಸದ್ಭಾವನಾ ಕಾಲ್ನಡಿಗೆ” (ಯಾತ್ರೆ) ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಸಮಾಜದಲ್ಲಿ ಶಾಂತಿ, ಸಾಮರಸ್ಯ, ಸಹಬಾಳ್ವೆ ಮತ್ತು ಮಹಾತ್ಮಾ ಗಾಂಧೀಜಿಯವರ ಅಹಿಂಸಾ ತತ್ವಗಳನ್ನು ಸಾರುವ ಉದ್ದೇಶದಿಂದ ಈ ವಿಶಿಷ್ಟ ನಡಿಗೆಯನ್ನು ಹಮ್ಮಿಕೊಳ್ಳಲಾಗಿದೆ. ಶುಕ್ರವಾರ ಮಧ್ಯಾಹ್ನ ನಂತರ ಸಂಜೆ 3:00 ಗಂಟೆಗೆ ಮಂಗಳೂರಿನ ಜ್ಯೋತಿ ವೃತ್ತದಿಂದ (ಅಂಬೇಡ್ಕರ್ ವೃತ್ತ) ಈ ಸದ್ಭಾವನಾ ಕಾಲ್ನಡಿಗೆಯು ಆರಂಭಗೊಳ್ಳಲಿದ್ದು, ಪುರಭವನದ (ಟೌನ್ ಹಾಲ್) ಗಾಂಧಿ ಪಾರ್ಕ್ ವರೆಗೆ ಸಾಗಲಿದೆ. ಗಾಂಧಿ ಪಾರ್ಕ್‌ನಲ್ಲಿ ರಾಷ್ಟ್ರಪಿತನ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮವು ಮುಕ್ತಾಯಗೊಳ್ಳಲಿದೆ.

ಈ ಐತಿಹಾಸಿಕ ನಡಿಗೆಯಲ್ಲಿ ಜಿಲ್ಲೆಯ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ಸಮಿತಿಯ ಪ್ರಮುಖ ನಾಯಕರು, ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ.

ಶಾಂತಿಪ್ರಿಯ ಸಾರ್ವಜನಿಕರು ಹಾಗೂ ಪಕ್ಷದ ಎಲ್ಲಾ ಹಂತದ ಮುಖಂಡರು, ಕಾರ್ಯಕರ್ತರು ಈ ಸದ್ಭಾವನಾ ಕಾಲ್ನಡಿಗೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹೀಂ ನವಾಝ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share News