• Home  
  • 119ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮ ಯಶಸ್ವಿ: ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಅತ್ಯಗತ್ಯ – ಪುಷ್ಪರಾಜ್ ಬಿ.ಎನ್
- LATEST NEWS

119ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮ ಯಶಸ್ವಿ: ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಅತ್ಯಗತ್ಯ – ಪುಷ್ಪರಾಜ್ ಬಿ.ಎನ್

ಮಂಗಳೂರು: ವಿದ್ಯಾರ್ಥಿಗಳು ಸಾಹಿತ್ಯದ ಬಗ್ಗೆ ಆಸಕ್ತಿ ಮತ್ತು ಅಭಿರುಚಿಯನ್ನು ಬೆಳೆಸಿಕೊಳ್ಳಲು ಓದುವ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳುವುದು ಅತ್ಯಂತ ಪೂರಕ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಪುಷ್ಪರಾಜ್ ಬಿ.ಎನ್ ತಿಳಿಸಿದ್ದಾರೆ. ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆ ಮಣ್ಣಗುಡ್ಡೆ ಇವರ ಜಂಟಿ ಆಶ್ರಯದಲ್ಲಿ ಜೂನ್ 27ರ ಶನಿವಾರದಂದು ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ 119ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಸಾಹಿತ್ಯದ […]

Share News

ಮಂಗಳೂರು: ವಿದ್ಯಾರ್ಥಿಗಳು ಸಾಹಿತ್ಯದ ಬಗ್ಗೆ ಆಸಕ್ತಿ ಮತ್ತು ಅಭಿರುಚಿಯನ್ನು ಬೆಳೆಸಿಕೊಳ್ಳಲು ಓದುವ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳುವುದು ಅತ್ಯಂತ ಪೂರಕ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಪುಷ್ಪರಾಜ್ ಬಿ.ಎನ್ ತಿಳಿಸಿದ್ದಾರೆ.

ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆ ಮಣ್ಣಗುಡ್ಡೆ ಇವರ ಜಂಟಿ ಆಶ್ರಯದಲ್ಲಿ ಜೂನ್ 27ರ ಶನಿವಾರದಂದು ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ 119ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಸಾಹಿತ್ಯದ ಓದು ವಿದ್ಯಾರ್ಥಿ ಜೀವನಕ್ಕೆ ಅಗತ್ಯ

ವಿದ್ಯಾರ್ಥಿ ದೆಸೆಯಲ್ಲೇ ಸಾಹಿತ್ಯದ ಕಡೆಗೆ ಒಲವು ಮೂಡಿಸುವುದು ಇಂದಿನ ಅಗತ್ಯವಾಗಿದೆ. ಪುಸ್ತಕ ಓದುವ ಹವ್ಯಾಸವು ಮಕ್ಕಳ ಜ್ಞಾನ ಮತ್ತು ವ್ಯಕ್ತಿತ್ವ ವಿಕಸನಕ್ಕೆ ದಾರಿದೀಪವಾಗುತ್ತದೆ ಎಂದು ಗಣ್ಯರು ಈ ಸಂದರ್ಭದಲ್ಲಿ ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ನಳಿನಿ ಅವರು ವಹಿಸಿದ್ದರು. ಹಿರಿಯ ಬರಹಗಾರರಾದ ಎನ್. ಸುಬ್ರಾಯ ಭಟ್ ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸುರೇಶ್ ಚಂದ್ರ ಶೆಟ್ಟಿ ಅವರು ಅತಿಥಿಗಳಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಕಾರ್ಯಕ್ರಮದ ಆರಂಭದಲ್ಲಿ ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಪ್ರಾಸ್ತಾವಿಕವಾಗಿ ಮಾತನಾಡಿ, ಎಲ್ಲರನ್ನೂ ಸ್ವಾಗತಿಸಿದರು. ಸುರೇಖಾ ಯಾಳವಾರ ಅವರು ಇಡೀ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು. ಶಾಲೆಯ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಸಾಹಿತ್ಯಾಸಕ್ತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Share News