ಮಂಗಳೂರು, ಮಾ.27 : ಜಿಲ್ಲೆಯಲ್ಲಿ ಶಾಲಾ – ಕಾಲೇಜುಗಳ ಸನಿಹದಲ್ಲಿರುವ ಅಂಗಡಿ, ವಾಣಿಜ್ಯ ಸಂಸ್ಥೆಗಳಲ್ಲಿ ಸಿಗರೇಟ್, ತಂಬಾಕು ಸೇರಿದಂತೆ ಧೂಮಪಾನ ಮತ್ತು ಮಾದಕ ವಸ್ತುಗಳನ್ನು ಮಾರಾಟ ಕಂಡುಬಂದಲ್ಲಿ ಅಂತಹ ಅಂಗಡಿಗಳ ಲೈಸನ್ಸ್ ರದ್ದುಗೊಳಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಸೂಚಿಸಿದ್ದಾರೆ.

ಶಾಲಾ ಕಾಲೇಜುಗಳಲ್ಲಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಕಾರ್ಯಕ್ರಮಗಳನ್ನು ಆಗ್ಗಿಂದಾಗೆ ನಡೆಸಬೇಕು. ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಸಾರ್ವಜನಿಕರಲ್ಲಿ ಡ್ರಗ್ಸ್ ಮುಕ್ತ ಜಾಗೃತಿ ಕಾರ್ಯಕ್ರಮವನ್ನು ಆಗ್ಗಿಂದಾಗೆ ನಡೆಸಬೇಕು. ಹೋಂ ಸ್ಟೇ ಮತ್ತು ಲಾಡ್ಜ್‍ಗಳಲ್ಲಿ ಆಗ್ಗಿಂದಾಗೆ ತಪಾಸಣೆ ನಡೆಸಬೇಕು. ಕರಾವಳಿ ಭದ್ರತಾ ಪೆÇಲೀಸರು ಬೋಟ್‍ಗಳನ್ನು ಅನಿರೀಕ್ಷಿತ ತಪಾಸಣೆ ನಡೆಸಬೇಕು. ಕೆ.ಎಸ್.ಆರ್.ಟಿ.ಸಿ ಬಸ್‍ಗಳಲ್ಲಿ ಪಾರ್ಸೆಲ್‍ಗಳ ಮೇಲೆ ನಿಗಾ ವಹಿಸಬೇಕು ಎಂದು ಅವರು ಸೂಚಿಸಿದರು.
ಕೈಗಾರಿಕಾ ಘಟಕಗಳಲ್ಲಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಬೇಕು. ರೈಲ್ವೆ ಮತ್ತು ವಿಮಾನ ನಿಲ್ದಾಣಗಳಲ್ಲಿ ನಿಗಾವಹಿಸಬೇಕು ಎಂದು ಪೊಲೀಸ್ ವರಿಷ್ಠಾಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಉಪ ಪೊಲೀಸ್ ಆಯುಕ್ತ ಮಿಥುನ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಶಿಕಾಂಥ್ ಉಪಸ್ಥಿತರಿದ್ದರು.